ಕೊಡಗು, ಅವಿಭಜಿತ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ರಾಜಕೀಯ ಪಕ್ಷಗಳಿಂದ ಬಿರುಸಿನ ಸ್ಪರ್ಧೆ ಆರಂಭವಾಗಿದೆ.
ಕೊಡಗು ಜಿಲ್ಲೆಯಲ್ಲಿ ಅರುಣ್ ಮಾಚಯ್ಯ, ಬೆಳಗಾವಿ ಜಿಲ್ಲೆಯಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಧಾರವಾಡದಲ್ಲಿ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ನಾಳೆ(31) ಚುನಾವಣೆ ನಡೆಯಲಿದೆ.
ಈ ಮೂರು ಮಂದಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹಿನ್ನೆಲೆಯಲ್ಲಿ ಪರಿಷತ್ತಿನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.
ಇದರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅರುಣ್ ಮಾಚಯ್ಯ ಸೋಲನ್ನು ಅನುಭವಿಸಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ್ ಬೊಮ್ಮಾಯಿ ಮತ್ತು ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಅವರು ಆಯ್ಕೆಯಾಗಿದ್ದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಅದೇ ರೀತಿ ಕಾಂಗ್ರೆಸ್‌ನಲ್ಲಿಯೂ ನೂತನ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಇದು ಸವಾಲಿನ ಪ್ರಶ್ನೆಯಾಗಿದೆ. |