ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸ್ಫೋಟ: ರಾಜ್ಯಾದ್ಯಂತ ಕಟ್ಟೆಚ್ಚರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸ್ಫೋಟ: ರಾಜ್ಯಾದ್ಯಂತ ಕಟ್ಟೆಚ್ಚರ
ಅಸ್ಸಾಂನಲ್ಲಿ ಗುರುವಾರ ಬೆಳಿಗ್ಗೆ ನಡೆದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಮಾಹಿತಿ ನೀಡಿದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾ ನಿರ್ದೇಶಕ ಎ.ಆರ್. ಇನ್ ಫ್ಯಾಂಟ್, ರಾಜ್ಯದ ಹಲವಡೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಎಲ್ಲಾ ಜಿಲ್ಲೆಗಳ ಎಸ್ಪಿಗಳು ಹಾಗೂ ನಗರ ಆಯುಕ್ತರುಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಸ್, ರೈಲ್ವೆ ಹಾಗೂ ವಿಮಾನ ನಿಲ್ದಾಣಗಳು, ಜನನಿಬಿಡ ಪ್ರದೇಶಗಳು, ಮಾರುಕಟ್ಟೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲು ಸೂಚನೆ ನೀಡಲಾಗಿದ್ದು, ಎಲ್ಲಾ ನಿಲ್ದಾಣಗಳ್ಲಿ ಹೊರ ಹಾಗೂ ಒಳ ಬರುವ ಪ್ರಯಾಣಕರನ್ನು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಳ್ಳುಬ್ಬಿಗೆ ವಿದ್ಯುತ್ ಕಾರ್ಖಾನೆ ಅಧ್ಯಕ್ಷಗಾದಿ
ಚುನಾವಣೆ: ಕಾಂಗ್ರೆಸ್–ಬಿಜೆಪಿಗೆ ಪ್ರತಿಷ್ಠೆಯ ಕಣ
ಶಂಕಿತ ಉಗ್ರ ನವೀದ್ ಸಿಲಿಂಡರ್ ಬಾಂಬ್ ತಜ್ಞ !
ಕುಮಾರಸ್ವಾಮಿ ವಿರುದ್ಧ ಮುಂದಿನ ವಾರ ಕೇಸು
ಮತ್ತೆ ತಲೆನೋವು ತಂದ ರಾಜ್ಯೋತ್ಸವ ಪ್ರಶಸ್ತಿ !
ಕಾಂಗ್ರೆಸ್ ಸೋಲು ಪತ್ತೆಗೆ ಸಮಿತಿ: ಡಿಕೆಶಿ