ಕನ್ನಡ ನಿಧಿ ಯೋಜನೆಗೆ 10ಕೋಟಿ ರೂ.ಹಣ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂರು ಲಕ್ಷ ರೂ.ಹಣ ಸಂಗ್ರಹಿಸಲಾಗಿದೆ ಎಂದು ತಿಳಿಸಿದ ಅವರು ನಿಧಿಗೆ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.
ಜಿಲ್ಲಾ ಹಾಗೂ ತಾಲೂಕು ಸಾಹಿತ್ಯ ಪರಿಷತ್‌ಗಳಿಗೆ ನೇರವಾಗಿ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿದ್ದಾರೆ ಎಂದು ತಿಳಿಸಿದರು.
ರಾಜ್ಯದ ನಾಲ್ಕು ವಿಭಾಗೀಯ ವಲಯಗಳಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಪ್ರಥಮ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. |