ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್‌ನ ನೃಪತುಂಗ ಪ್ರಶಸ್ತಿಗೆ ಈ ಬಾರಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಒಂದು ಕೋಟಿ ರೂಪಾಯಿ ದತ್ತಿ ನಿಧಿಯಿಂದ ನೀಡಲಾಗುವ ಈ ಪ್ರಶಸ್ತಿಯ ಮೊತ್ತ 5 ಲಕ್ಷ ರೂ.ಗಳಾಗಿರುತ್ತದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ಆರ್.ಕೆ. ನಲ್ಲೂರು ಪ್ರಸಾದ್, ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಪಾಟೀಲ್ ಪುಟ್ಟಪ್ಪ ಅವರನ್ನು 2008ನೇ ವರ್ಷದ ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ಪಾಟೀಲ್ ಪುಟ್ಟಪ್ಪನವರು, ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಪ್ರಶಸ್ತಿ ತಮಗೆ ದೊರೆತಿರುವುದು ಕನ್ನಡ ನಾಡು-ನುಡಿ ರಕ್ಷಣೆಯ ತಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಗಣನೀಯ ಸೇವೆಸಲ್ಲಿಸಿರುವ ಹಿರಿಯ ಸಾಹಿತಿಯೊಬ್ಬರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಕಳೆದ ವರ್ಷದಿಂದ ಆರಂಭಿಸಲಾಗಿರುವ ಈ ಪ್ರಶಸ್ತಿಗೆ ಮೊದಲಿಗರಾಗಿ ವಿಶ್ರಾಂತ ಕುಲಪತಿ ದೇ. ಜವರೇಗೌಡ ಅವರು ಭಾಜನರಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಾಧ್ವಿ ಪ್ರಾಗ್ಯಾಗೆ ಬೆಂಗಳೂರಿನಲ್ಲಿ ಮಂಪರು ಪರೀಕ್ಷೆ
ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
ಸುಳ್ಳು ಮಾಹಿತಿ: ಅಧಿಕಾರಿಗಳ ವಿರುದ್ಧ ದೂರು
ನ.3 ರಿಂದ ಹಂಪಿ ಉತ್ಸವಕ್ಕೆ ಚಾಲನೆ
ಬೆಳೆಗೆರೆ, ದಂಡಾವತಿ: ರಾಜ್ಯೋತ್ಸವ ಪಟ್ಟಿ ಪ್ರಕಟ
ನ.1 ರಂದು ಖಾಸಗಿ ಕಂಪೆನಿಗಳಿಗೆ ರಜೆ ಕಡ್ಡಾಯ