ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ನಾಯಕರಾದ ನಾರಾಯಣ ಸ್ವಾಮಿ ಹಾಗೂ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಮುಂದಿನ ತಿಂಗಳ 10ರೊಳಗಾಗಿ ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸಲಿದ್ದು, ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಏರ್ಪಡಿಸುವ ಮೂಲಕ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಮೆರಾಜುದ್ದೀನ್ ಪಟೇಲ್ ನಿಧನದಿಂದ ತೆರವಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ನಿಮಿತ್ತ ಇಂದು ಸಭೆ ನಡೆಸಲಾಗಿತ್ತು. ಮುಂಬರುವ ವಿಧಾನಸಭಾ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆಯತ್ತ ದೃಷ್ಟಿನೆಟ್ಟಿರುವ ಜೆಡಿಎಸ್ ಗೆ ಸೂಕ್ತ ರಾಜ್ಯಾಧ್ಯಕ್ಷರ ಆಯ್ಕೆ ಕೂಡ ಮುಖ್ಯವಾಗಿತ್ತು. ಕೊನೆಗೆ ಕುಮಾರಸ್ವಾಮಿ ಆಯ್ಕೆ ಕುರಿತಂತೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದ್ದರಿಂದ ಯಾವುದೇ ಗೊಂದಲವುಂಟಾಗಿಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ. |
|