ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ ಚರಿತ್ರೆಯಲ್ಲಿ ಐತಿಹಾಸಿಕ ದಿನ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಚರಿತ್ರೆಯಲ್ಲಿ ಐತಿಹಾಸಿಕ ದಿನ: ಸಿಎಂ
ಕನ್ನಡ ಭಾಷಾ ಚರಿತ್ರೆಯಲ್ಲಿಯೇ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಣ್ಣಿಸಿದ್ದಾರೆ.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪನವರು, ಇದು ಕನ್ನಡಿಗರು ನಡೆಸಿದ ಅವಿರತ ಹೋರಾಟಕ್ಕೆ ಸಂದ ಜಯವಾಗಿದೆ ಎಂದಿದ್ದಾರೆ.

ಈ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರದ ಮುಖೇನೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಯವರಿಗೆ ಬರೆದಿರುವ ಪತ್ರದಲ್ಲಿ ಕನ್ನಡಕ್ಕೆ ನೀಡಿರುವ ಶಾಸ್ತ್ರೀಯ ಸ್ಥಾನಮಾನದ ಕುರಿತು ವೈಯಕ್ತಿವಾಗಿ ಹಾಗೂ ಆರು ಕೋಟಿ ಕನ್ನಡಿಗರ ಪರವಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ನವೆಂಬರ್ 5ರಂದು ನಿಗದಿಯಾಗಿದ್ದ ಸರ್ವ ಪಕ್ಷ ನಿಯೋಗವನ್ನು ರದ್ದುಪಡಿಸಿರುವುದಾಗಿ ಪತ್ರದಲ್ಲಿ ತಿಳಿಸಿರುವ ಮುಖ್ಯಮಂತ್ರಿಗಳು, ಆದರೆ ಇತರ ವಿಷಯ ಚರ್ಚಿಸಲು ಪ್ರತ್ಯೇಕ ಸಮಯ ನಿಗದಿಪಡಿಸಿಕೊಂಡು ಪ್ರಧಾನಿಯವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ
ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ
ನಾಡಿನಾದ್ಯಂತ ರಾಜ್ಯೋತ್ಸವ ಸಂಭ್ರಮ
ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ