ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡದ ಅಭಿವೃದ್ಧಿಗೆ 25 ಕೋಟಿ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡದ ಅಭಿವೃದ್ಧಿಗೆ 25 ಕೋಟಿ: ಯಡಿಯೂರಪ್ಪ
ಕನ್ನಡದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತಿವರ್ಷ 25ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡದ ನೆಲ-ಜಲ,ಭಾಷೆ ಅಭಿವೃದ್ಧಿಗಾಗಿ ಪ್ರತಿವರ್ಷ 25ಕೋಟಿ ರೂ.ನೀಡುವುದಾಗಿ ಅವರು ಹೇಳಿದರು. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿನ ಕನ್ನಡ ಅಧ್ಯಯನ ಕೇಂದ್ರಗಳ ಚಟುವಟಿಕೆಗಾಗಿ ಪ್ರತಿವರ್ಷ 2ಕೋಟಿ ರೂ.ಮೀಸಲಿರಿಸುವುದಾಗಿ ಯಡಿಯೂರಪ್ಪ ಹೇಳಿದರು.

ಅಲ್ಲದೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿಸಿಕೊಟ್ಟ ಕೇಂದ್ರ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

ಹಾಗೆಯೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿದಂತೆಯೇ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು, ಸಂವಿಧಾನದ 371ಡಿ ವಿಧಿಗೆ ತಿದ್ದುಪಡಿ ತರಲು ವಿಶೇಷ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕನ್ನಡ ನಾಮಫಲಕ- 60 ದಿನ ಗಡುವು: ಚಂದ್ರು
ಕನ್ನಡ ಚರಿತ್ರೆಯಲ್ಲಿ ಐತಿಹಾಸಿಕ ದಿನ: ಸಿಎಂ
ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ
ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ
ನಾಡಿನಾದ್ಯಂತ ರಾಜ್ಯೋತ್ಸವ ಸಂಭ್ರಮ
ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ