ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆರೋಗ್ಯ ಕವಚ: ಅಬ್ದುಲ್ ಕಲಾಂ ಉದ್ಘಾಟನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರೋಗ್ಯ ಕವಚ: ಅಬ್ದುಲ್ ಕಲಾಂ ಉದ್ಘಾಟನೆ
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಆರೋಗ್ಯ ಕವಚ-108ನ್ನು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಶನಿವಾರ ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತುರ್ತು ನಿರ್ವಹಣೆ ಮತ್ತು ಸಂಶೋಧನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, 2010ರೊಳಗಾಗಿ 517 ಅಂಬುಲೆನ್ಸ್‌‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಈ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಖಾಸಗಿ ಸಮಾರಂಭದಲ್ಲಿ ಪಾಲ್ಗೊಂಡ ಅಬ್ದುಲ್ ಕಲಾಂ, ಮುಂಬರುವ ದಿನಗಳಲ್ಲಿ ರಾಷ್ಟ್ರದಲ್ಲಿ ಆಹಾರ ಬೇಡಿಕೆ ಹೆಚ್ಚಾಗುವುದರಿಂದ ಆಹಾರ ಧಾನ್ಯಗಳ ಉತ್ಪಾದನೆಯನ್ನು ದ್ವಿಗುಣಗೊಳಿಸಲು ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ತೆರಳಿ ರೈತರ ಜೊತೆಗೂಡಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಆಹಾರದ ಬೇಡಿಕೆ 230 ಮಿಲಿಯನ್ ಟನ್‌‌‌‌ನಿಂದ 400 ಮಿಲಿಯನ್ ಟನ್‌‌‌ಗಳಿಗೆ ಏರಲಿದ್ದು, ಈ ಬೇಡಿಕೆಯನ್ನು ನಿಲ್ಲಿಸಲು ಕೃಷಿಯಲ್ಲಿ ತಂತ್ರಜ್ಞಾನದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮೈತ್ರಿ ಕುರಿತು ಮಾತನಾಡಿದರೆ ಎಚ್ಚರ: ದೇಶಪಾಂಡೆ
ಕನ್ನಡದ ಅಭಿವೃದ್ಧಿಗೆ 25 ಕೋಟಿ: ಯಡಿಯೂರಪ್ಪ
ಕನ್ನಡ ನಾಮಫಲಕ- 60 ದಿನ ಗಡುವು: ಚಂದ್ರು
ಕನ್ನಡ ಚರಿತ್ರೆಯಲ್ಲಿ ಐತಿಹಾಸಿಕ ದಿನ: ಸಿಎಂ
ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ
ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ