ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೈ-ಕ ಅಭಿವೃದ್ಧಿಗೆ ಒತ್ತು: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೈ-ಕ ಅಭಿವೃದ್ಧಿಗೆ ಒತ್ತು: ಯಡಿಯೂರಪ್ಪ
ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಕುರಿತು ಈವರೆಗೆ ಬಂದಿರುವ 3 ಸಮಿತಿಗಳ ಶಿಫಾರಸನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಆ ಪ್ರದೇಶದ ಮುಖಂಡರೊಂದಿಗೆ ಶೀಘ್ರದಲ್ಲಿಯೇ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಬಳಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದರು.

ಹಿಂದಿಳಿದಿರುವ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಸಂವಿಧಾನ 371ನೇ (ಡಿ) ವಿಧಿಗೆ ತಿದ್ದುಪಡಿ ತಂದು ಆ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದ್ದಾರೆ.

10 ಲಕ್ಷ ಉದ್ಯೋಗ:

ಮುಂದಿನ ಐದು ವರ್ಷಗಳಲ್ಲಿ ಹತ್ತು ಲಕ್ಷ ಉದ್ಯೋಗ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಬಡತನ, ನಿರುದ್ಯೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿ ಮಾಡುವುದು ತಮ್ಮ ಗುರಿ ಎಂದು ತಿಳಿಸಿದ ಅವರು, ಶಿವಮೊಗ್ಗ ಹಾಗೂ ಗುಲ್ಬರ್ಗಾಗಳಲ್ಲಿ ಮೊದಲ ಹಂತವಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರೋಗ್ಯ ಕವಚ: ಅಬ್ದುಲ್ ಕಲಾಂ ಉದ್ಘಾಟನೆ
ಮೈತ್ರಿ ಕುರಿತು ಮಾತನಾಡಿದರೆ ಎಚ್ಚರ: ದೇಶಪಾಂಡೆ
ಕನ್ನಡದ ಅಭಿವೃದ್ಧಿಗೆ 25 ಕೋಟಿ: ಯಡಿಯೂರಪ್ಪ
ಕನ್ನಡ ನಾಮಫಲಕ- 60 ದಿನ ಗಡುವು: ಚಂದ್ರು
ಕನ್ನಡ ಚರಿತ್ರೆಯಲ್ಲಿ ಐತಿಹಾಸಿಕ ದಿನ: ಸಿಎಂ
ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ