ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ: ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ: ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ
ಸ್ಥಳೀಯ ಸಂಸ್ಥೆಗಳ ಮೂರು ವಿಧಾನಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಗಳಿಸುವ ಮೂಲಕ, ಕಾಂಗ್ರೆಸ್ ತೀವ್ರ ಮುಖಭಂಗವನ್ನು ಅನುಭವಿಸುವಂತಾಗಿದೆ.

ಅಕ್ಟೋಬರ್ 31ರಂದು ಬೆಳಗಾವಿ,ಧಾರವಾಡ ಹಾಗೂ ಕೊಡಗು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ ಮತಎಣಿಕೆ ಕಾರ್ಯ ಆರಂಭಗೊಂಡಿತ್ತು.

ಕೊಡಗು: ಕೊಡಗು ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಜಿ.ಮೇದಪ್ಪ ಅವರು ಕಾಂಗ್ರೆಸ್‌ನ ಮೆಟ್ಟು ಚಂಗಪ್ಪ ವಿರುದ್ಧ ಸುಮಾರು 177ಮತಗಳ ಅಂತರದಿಂದ ಜಯಗಳಿಸಿದರು.

ಕೊಡಗಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇದಪ್ಪ ಅವರು ಒಟ್ಟು 751ಮತ ಗಳಿಸಿದ್ದರೆ, ಕಾಂಗ್ರೆಸ್‌ನ ಚಂಗಪ್ಪ ಅವರು 574ಮತ ಪಡೆದಿದ್ದರು.

ಕೊಡಗು ಕ್ಷೇತ್ರದಲ್ಲಿ ಈವರೆಗೂ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್,ಜೆಡಿಎಸ್,ಪಕ್ಷೇತರರೇ ಗೆಲುವು ಸಾಧಿಸುತ್ತಿದ್ದರು, ಆದರೆ ಈ ಬಾರಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ಮೊತ್ತ ಮೊದಲ ಬಾರಿಗೆ ಕೊಡಗಿನಲ್ಲಿ ತನ್ನ ಖಾತೆ ತೆರೆದಂತಾಗಿದೆ.

ಬೆಳಗಾವಿ: ಸ್ಥಳೀಯ ಸಂಸ್ಥೆಯ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬೆಳಗಾವಿ ಕೂಡ ಬಿಜೆಪಿ ತೆಕ್ಕೆಗೆ ಸೇರಿದ್ದು, ಬಿಜೆಪಿ ಅಭ್ಯರ್ಥಿ ಶಶಿಕಾಂತ್ ನಾಯಕ್ ಅವರು ಕಾಂಗ್ರೆಸ್‌ನ ಎ.ಸಿ.ಮಾಳಗಿ ಅವರನ್ನು 1418ಮತಗಳ ಅಂತರದಿಂದ ಪರಾಜಯಗೊಳಿಸಿದ್ದಾರೆ.
ಬಿಜೆಪಿಯ ಶಶಿಕಾಂತ್ ನಾಯಕ್ ಅವರು 4958ಮತ ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾಳಗಿಯವರು 3540 ಮತ ಗಳಿಸುವ ಮೂಲಕ ಸೋಲನ್ನನುಭವಿಸಿದ್ದಾರೆ.

ಧಾರವಾಡ: ಧಾರವಾಡ ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ,ಮಾಜಿ ಶಾಸಕ ಶಿವರಾಜ್ ಸಜ್ಜನ ಅವರು ಕಾಂಗ್ರೆಸ್‌ನ ಶ್ರೀನಿವಾಸ್ ಮಾನೆ ಅವರನ್ನು 312ಮತಗಳ ಅಂತರದಲ್ಲಿ ಸೋಲಿಸಿದರು.

ಬಿಜೆಪಿಯ ಶಿವರಾಜ್ ಸಜ್ಜನ 3720 ಮತ ಪಡೆದಿದ್ದರೆ, ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 3127 ಮತ ಗಳಿಸಿದ್ದರು.

ಬಿಜೆಪಿ ವಿಜಯೋತ್ಸವ: ವಿಧಾನಪರಿಷತ್‌ಗೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿರುವುದರಿಂದ ಬಿಜೆಪಿ ವಿಜಯೋತ್ಸವ ಆಚರಿಸಿದ್ದು, ಇದು ಪಕ್ಷಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇಂದು ಹಂಪಿ ಉತ್ಸವಕ್ಕೆ ಚಾಲನೆ
ಕೆಪಿಎಸ್‌ಸಿ ಸಂದರ್ಶನ: ಅವ್ಯವಹಾರ ಆರೋಪ
ಬೌದ್ದಧರ್ಮಕ್ಕೆ ಮತಾಂತರವಾಗಬೇಡಿ: ಪೇಜಾವರಶ್ರೀ
ಸಮರ್ಥ ನಾಯಕತ್ವ ಅಗತ್ಯ
ಕೊಡಗಿನಲ್ಲಿ ಪೋಲಿಯೋ ಪತ್ತೆ
ಕನ್ನಡೇತರ ಹೆಸರುಗಳಿರುವ ಚಿತ್ರಗಳಿಗೆ ಎಳ್ಳುನೀರು