ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಂಗಳೂರು: ಭೀಕರ ಅಪಘಾತಕ್ಕೆ 5 ಬಲಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಂಗಳೂರು: ಭೀಕರ ಅಪಘಾತಕ್ಕೆ 5 ಬಲಿ
ಇಲ್ಲಿನ ಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನಿಂದ ಪಣಂಬೂರು ಬೀಚಿಗೆ ಹೋಗುವ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಈ ಭೀಕರ ಅಫಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.

ಮೃತರನ್ನು ಪುತ್ತೂರಿನ ಸಮೀರ್, ವಿಕ್ರಂ, ಪ್ರೀತಮ್ ಅನ್ವರ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ.

ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯಾಗಿ ಪರಿವರ್ತಿಸುವ ಸಲುವಾಗಿ ಕಾಮಗಾರಿ ನಡೆಯುತ್ತಿದ್ದು, ಇಕ್ಕಟ್ಟಾದ ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸಿದ ಪರಿಣಾಮ ಈ ದುರ್ಘಟನೆ ನಡೆಯಲು ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಅಪಘಾತಕ್ಕೂ ಬಸ್ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಕಾರಣವೆನ್ನಲಾಗಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ.10ರಂದು ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಹೆದ್ದಾರಿಯಲ್ಲಿ ಖಾಸಗಿ ಬಸ್‌‌ಗೆ ನಿಷೇಧ: ಅಶೋಕ್
ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
ಚುನಾವಣೆ: ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ
ಇಂದು ಹಂಪಿ ಉತ್ಸವಕ್ಕೆ ಚಾಲನೆ
ಕೆಪಿಎಸ್‌ಸಿ ಸಂದರ್ಶನ: ಅವ್ಯವಹಾರ ಆರೋಪ