ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
NRB
ಕೆಂದ್ರ ಸರ್ಕಾರ ಹಿಂದಿ ಭಾಷೆಗೆ ನೀಡಿರುವ ಪ್ರಾಶಸ್ತ್ಯವನ್ನು ಪ್ರಾದೇಶಿಕ ಭಾಷೆಗೆ ನೀಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದಿ ಭಾಷೆಗೆ ಯಾವ ರೀತಿಯಲ್ಲಿ ವಿಶೇಷ ಸ್ಥಾನಮಾನ ನೀಡಿದೆಯೋ ಅದೇ ರೀತಿಯಲ್ಲಿ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಮೂಲಕ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಪ್ರಚಾರ ಲಭಿಸುವುದಲ್ಲದೆ, ಭಾಷೆ ಅಭಿವೃದ್ಧಿಗೊಳಿಸಲು ಸಹಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂವಿಧಾನದ 344 ಮತ್ತು 351ರ ಅಧಿನಿಯಮದಡಿ ಹಿಂದಿ ಭಾಷೆಗೆ ವಿಶೇಷ ಸ್ಥಾನಮಾನ ನೀಡಿದೆ. ಇದೇ ರೀತಿಯಲ್ಲಿ ಎಲ್ಲಾ ಪ್ರಾದೇಶಿಕ ಭಾಷೆಗೆ ಪ್ರಚಾರ ನೀಡುವ ಸಲುವಾಗಿ ರಾಷ್ಟ್ರೀಯ ಭಾಷಾ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಅವರು ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು: ಭೀಕರ ಅಪಘಾತಕ್ಕೆ 5 ಬಲಿ
ನ.10ರಂದು ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಹೆದ್ದಾರಿಯಲ್ಲಿ ಖಾಸಗಿ ಬಸ್‌‌ಗೆ ನಿಷೇಧ: ಅಶೋಕ್
ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
ಚುನಾವಣೆ: ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ
ಇಂದು ಹಂಪಿ ಉತ್ಸವಕ್ಕೆ ಚಾಲನೆ