ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ: ಸೋಲು ನೋವು ತಂದಿದೆ-ದೇಶಪಾಂಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ: ಸೋಲು ನೋವು ತಂದಿದೆ-ದೇಶಪಾಂಡೆ
ವಿಧಾನಪರಿಷತ್ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌‌ಗೆ ಮೂರು ಕ್ಷೇತ್ರದಲ್ಲಿನ ಸೋಲಿನಿಂದಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಚುನಾವಣೆಯಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ತೀವ್ರ ನೋವನ್ನುಂಟು ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್. ವಿ.ದೇಶಪಾಂಡೆ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ ಮತ್ತು ಅಧಿಕಾರದ ದುರ್ಬಳಕೆ ಮಾಡಿಕೊಂಡು ಈ ಚುನಾವಣೆಯನ್ನು ಗೆದ್ದಿದೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿಯ ಗೆಲುವನ್ನು ಸವಾಲಾಗಿ ಸ್ವೀಕರಿಸಿ, ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವ ಮೂಲಕ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಅವರು ತಿಳಿಸಿದರು.

ಜೆಡಿಎಸ್ ಆರೋಪ:ಇದೇ ವೇಳೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಚೆಲುವರಾಯ ಸ್ವಾಮಿ, ಎಚ್.ಡಿ. ಕುಮಾರಸ್ವಾಮಿಯವರ ಆಡಳಿತ ಅವಧಿಯಲ್ಲಿ ಜಾರಿಗೆ ಬಂದ ಜನಪ್ರಿಯ ಯೋಜನೆಗಳನ್ನು ಇದೀಗ ಬಿಜೆಪಿ ಲಾಭ ಮಾಡಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
ಮಂಗಳೂರು: ಭೀಕರ ಅಪಘಾತಕ್ಕೆ 5 ಬಲಿ
ನ.10ರಂದು ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಹೆದ್ದಾರಿಯಲ್ಲಿ ಖಾಸಗಿ ಬಸ್‌‌ಗೆ ನಿಷೇಧ: ಅಶೋಕ್
ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
ಚುನಾವಣೆ: ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ