ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಾಲಿನ ದರ ಏರಿಕೆ ಇಲ್ಲ: ಸವದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಾಲಿನ ದರ ಏರಿಕೆ ಇಲ್ಲ: ಸವದಿ
ಹಾಲಿನ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಲಕ್ಷ್ಮಣ್ ಸವದಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡುವ ಯೋಜನೆ ರಾಜಕೀಯ ಪ್ರೇರಿತವಾದುದಾಗಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ತಿಳಿಸಿದ್ದಾರೆ.

ರಾಜ್ಯದ 13 ಹಾಲು ಒಕ್ಕೂಟದ ತಂಡದ ಅಧ್ಯಕ್ಷರ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಮಂಗಳವಾರ ಅಥವಾ ಬುಧವಾರ, ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ ಅವರೊಂದಿಗೆ ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಇದೇ ವೇಳೆ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ಇದು ಮುಂದಿನ ಉಪಚುನಾವಣೆಗೆ ದಾರಿ ಮಾಡಿಕೊಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚುನಾವಣೆ: ಸೋಲು ನೋವು ತಂದಿದೆ-ದೇಶಪಾಂಡೆ
ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
ಮಂಗಳೂರು: ಭೀಕರ ಅಪಘಾತಕ್ಕೆ 5 ಬಲಿ
ನ.10ರಂದು ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಹೆದ್ದಾರಿಯಲ್ಲಿ ಖಾಸಗಿ ಬಸ್‌‌ಗೆ ನಿಷೇಧ: ಅಶೋಕ್
ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ