ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಮೂರು ಘಟಕಗಳು ಹಾಗೂ ನಾಗ್ಝರಿಯ ಒಂದು ಘಟಕ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 2ಮತ್ತು 5ನೇ ಘಟಕಗಳು ದುರಸ್ತಿಯಲ್ಲಿವೆ. 3 ನೇ ಘಟಕ ಹಾಗೂ ನಾಗ್ಝರಿ ಘಟಕವನ್ನು ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳಿ ಸಲಾಗಿದೆ. ಇದರಿಂದ ಒಟ್ಟು 775 ಮೆಗ ವ್ಯಾಟ್ ವಿದ್ಯುತ್ ಉತ್ಪಾದನೆ ಖೋತಾ ಆಗಿದೆ ಎಂದು ಉನ್ನತ ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.

500 ಮೆಗಾವ್ಯಾಟ್ ಸಾಮರ್ಥ್ಯದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರ ಎರಡು ತಿಂಗಳ ಹಿಂದೆಯೇ ಕಾರ್ಯಾರಂಭಿಸಿ, ಅಧಿಕೃತವಾಗಿ ಸೋಮವಾರ ಉದ್ಘಾಟನೆಯಾಗಿದೆ.

ಆದರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದಿಸುತ್ತಿಲ್ಲ. ಕೆಲವು ದಿನಗಳ ಹಿಂದೆ 400ಮೆಗಾ ವ್ಯಾಟ್‌ವರೆಗೂ ಉತ್ಪಾದನೆಯಾಗುತ್ತಿತ್ತು. ಆದರೆ ಈಗ ಮತ್ತೆ ಕಡಿಮೆ ಯಾಗಿದ್ದು, ಆರಂಭಿಕ ಸಮಸ್ಯೆಗಳು ಕಾಣಿಸಿಕೊಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇತಿಹಾಸ ತಿರುಚುತ್ತಿರುವ ಪೇಜಾವರಶ್ರೀ: ದಸಂಸ
ಕೆಪಿಸಿಸಿ ಪಟ್ಟ ತಪ್ಪಲು ಲಿಂಗಾಯಿತರೇ ಕಾರಣ: ಸೋಮಣ್ಣ
ಹಂಪಿ ಉತ್ಸವ ಅವಿಸ್ಮರಣೀಯ: ಆಡ್ವಾಣಿ
ಬಳ್ಳಾರಿ: ವಿದ್ಯುತ್ ಸ್ವಾವಲಂಬನೆಗೆ ಆಡ್ವಾಣಿ ಸಲಹೆ
ಹಾಲಿನ ದರ ಏರಿಕೆ ಇಲ್ಲ: ಸವದಿ
ಚುನಾವಣೆ: ಸೋಲು ನೋವು ತಂದಿದೆ-ದೇಶಪಾಂಡೆ