ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ಕರಾವಳಿಯ ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಸಲುವಾಗಿ ಪ್ರತ್ಯೇಕ ಪ್ಯಾಕೇಜ್ ಸಿದ್ದಪಡಿಸುತ್ತಿರುವುದಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ- ಈ ಮೂರು ಜಿಲ್ಲೆಗಳ ಅಭಿವೃದ್ಧಿಯನ್ನು ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿಪಡಿಸುವ ಉದ್ದೇಶ ಇದೆ ಎಂದು ತಿಳಿಸಿದ್ದಾರೆ.

ಈ ಪ್ಯಾಕೆಜ್ ಗಳನ್ನು ಕನಿಷ್ಠ 50 ವರ್ಷಗಳ ದೂರದೃಷ್ಟಿ ಇಟ್ಟುಕೊಂಡೇ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಮಾಡಬೇಕಾಗಿರುವ ಕಾರ್ಯಗಳ ಕುರಿತಾದ ಸಮಗ್ರ ವರದಿಯನ್ನು ಮಾರ್ಚ್ 31ರಂದು ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೂರು ಜಿಲ್ಲೆಗಳಲ್ಲಿಯೂ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಈ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವ ಕೆಲಸವನ್ನು ಪ್ರಾಧಿಕಾರ ಮೊದಲು ಮಾಡಲಿದೆ. ಈ ಯೋಜನೆಗಾಗಿ ಮುಖ್ಯಮಂತ್ರಿಗಳು ಮೂರು ಜಿಲ್ಲೆಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್
ಇತಿಹಾಸ ತಿರುಚುತ್ತಿರುವ ಪೇಜಾವರಶ್ರೀ: ದಸಂಸ
ಕೆಪಿಸಿಸಿ ಪಟ್ಟ ತಪ್ಪಲು ಲಿಂಗಾಯಿತರೇ ಕಾರಣ: ಸೋಮಣ್ಣ
ಹಂಪಿ ಉತ್ಸವ ಅವಿಸ್ಮರಣೀಯ: ಆಡ್ವಾಣಿ
ಬಳ್ಳಾರಿ: ವಿದ್ಯುತ್ ಸ್ವಾವಲಂಬನೆಗೆ ಆಡ್ವಾಣಿ ಸಲಹೆ
ಹಾಲಿನ ದರ ಏರಿಕೆ ಇಲ್ಲ: ಸವದಿ