ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ ಸ್ಮಾರಕಕ್ಕೆ 8 ಕೋಟಿ: ಕರಂದ್ಲಾಜೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ ಸ್ಮಾರಕಕ್ಕೆ 8 ಕೋಟಿ: ಕರಂದ್ಲಾಜೆ
ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜ್ ಕುಮಾರ್ ಸ್ಮಾರಕ ನಿರ್ಮಾಣ ಕಾಮಗಾರಿಗೆ ನ. 13ರಂದು ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಂಗಳವಾರ ಪಾರ್ವತಮ್ಮ ರಾಜ್‌‌‌ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ರಾಜ್ ಕುಮಾರ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೇ 8 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಅತ್ಯುತ್ತಮ ಸ್ಮಾರಕ ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ ಅವರು, ಇದೇ 13ರಂದು ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಹೇಳಿದರು.

ಚಿತ್ರರಂಗದ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ ಸಚಿವರು, ಈ ಕುರಿತು ಸಮಗ್ರ ವರದಿ ನೀಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಿಳಿಸಿರುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೆಎಸ್‌‌ಡಿಎಲ್ ಸ್ಥಳಾಂತರಕ್ಕೆ ಸರ್ಕಾರದ ಚಿಂತನೆ
ನಕ್ಸಲೀಯರ ಜತೆ ಬಿಜೆಪಿ ಮುಖಂಡರ ಚರ್ಚೆ!
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್
ಇತಿಹಾಸ ತಿರುಚುತ್ತಿರುವ ಪೇಜಾವರಶ್ರೀ: ದಸಂಸ