ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಕ್ಷಮೆಗೆ ಯಡಿಯೂರಪ್ಪ ಪಟ್ಟು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಕ್ಷಮೆಗೆ ಯಡಿಯೂರಪ್ಪ ಪಟ್ಟು
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿ ಬುಧವಾರ ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಈ ರೀತಿ ಆರೋಪ ಮಾಡುವ ಮೂಲಕ ಸ್ಥಳೀಯ ಪ್ರತಿನಿಧಿಗಳಿಗೆ ಅವಮಾನ ಮಾಡಿದ್ದಾರೆ. ಅದಕ್ಕಾಗಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಕ್ಷಮೆ ಕೇಳದಿದ್ದರೆ ಸ್ಥಳೀಯ ಜನಪ್ರತಿನಿಧಿಗಳಿಗಳು ಅವರ ವಿರುದ್ಧ ಪ್ರತಿಭಟನೆಗೆ ಇಳಿಯುತ್ತಾರೆ. ಆಗ ಉಂಟಾಗುವ ಕಾನೂನು ಮತ್ತು ಸುವ್ಯವಸ್ಥೆಗೆ ಪ್ರತಿಪಕ್ಷ ನಾಯಕರೇ ಹೊಣೆಯಾಗುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಸಾಲುಸಾಲಾಗಿ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ಆ ಪಕ್ಷದ ನಾಯಕರು ಕಳವಳಕ್ಕೆ ಒಳಗಾಗಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮುಂಬರುವ 8 ವಿಧಾನಸಭಾ ಉಪಚುನಾವಣೆಯಲ್ಲಿಯೂ ಬಿಜೆಪಿ ಜಯ ಗಳಿಸಲಿದೆ ಎಂದು ಭವಿಷ್ಯ ನುಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸ್ವರ ಸಾಮ್ರಾಟನಿಗೆ ಅಭಿನಂದನೆಗಳ ಮಹಾಪೂರ
ಸೋಲಿನ ಪರಾಮರ್ಶೆ: ಕಾಂಗ್ರೆಸ್ ಸಭೆ
ಲೋಕಾಯುಕ್ತ ತನಿಖೆಗೆ ಸಿದ್ದ: ರೇವಣ್ಣ
ಈಶ್ವರಪ್ಪ ಜತೆ ಜೆಡಿಎಸ್ ಮುಖಂಡರ ಮಾತುಕತೆ !
ಕಾಂಗ್ರೆಸ್‌ಗೆ ಭ್ರಮನಿರಸನ: ಬಿಜೆಪಿ
ರಾಜ್ ಸ್ಮಾರಕಕ್ಕೆ 8 ಕೋಟಿ: ಕರಂದ್ಲಾಜೆ