ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜೆಡಿಎಸ್ ಜತೆ ಮೈತ್ರಿ: ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್ ಜತೆ ಮೈತ್ರಿ: ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ
ವಿಧಾನಪರಿಷತ್ ಉಪಚುನಾವಣೆಯಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾತುಕತೆ ಇದೀಗ ಮತ್ತೆ ಗರಿಗೆದರಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ತಡವಾಗಿಯಾದರೂ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದೆ ಎಂದು ತಿಳಿದು ಬಂದಿದೆ.

ನಿನ್ನೆಯಷ್ಟೆ ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆಯವರಿಗೆ ಮೈತ್ರಿ ಮಾಡಿಕೊಂಡು ಮುಂದುವರಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ಈ ಮೊದಲು ಜೆಡಿಎಸ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವಂತೆ ಅನೇಕ ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದ್ದರೂ, ಕಾಂಗ್ರೆಸ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ.

ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಕಾಂಗ್ರೆಸ್‌ಗೆ ನುಂಗಲಾರದ ಬಿಸಿತುಪ್ಪವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಗಳಲ್ಲಿ ಜಾತ್ಯತೀತ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯುವಂತೆ ಹೈಕಮಾಂಡ್ ಕೆಪಿಸಿಸಿಗೆ ತಿಳಿಸಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರೇವಣ್ಣ ವಿರುದ್ಧ ತನಿಖೆಗೆ ಆದೇಶ
ಕಾಂಗ್ರೆಸ್ ಸಭೆಗೆ ಸಿದ್ದು ಗೈರು
ಜೆಡಿಎಸ್ ಏಕಾಂಗಿ ಹೋರಾಟ: ಕುಮಾರಸ್ವಾಮಿ
ಜ.29 ರಿಂದ 75ನೇ ಸಾಹಿತ್ಯ ಸಮ್ಮೇಳನ
ಪೊಲೀಸರಿಗೆ ಶರಣಾಗಲಾರೆ: ನಕ್ಸಲ್ ಮುಖಂಡ ಬಿಜಿಕೆ
ಪಂಚಾಯ್ತಿಗಳಿಗೆ ಉಸ್ತುವಾರಿ ಸಮಿತಿ: ಉಗ್ರಪ್ಪ ಕಿಡಿ