ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿದ್ಯುತ್ ಕೊರತೆ: ಈಶ್ವರಪ್ಪ ನೇತೃತ್ವದಲ್ಲಿ ಸಭೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದ್ಯುತ್ ಕೊರತೆ: ಈಶ್ವರಪ್ಪ ನೇತೃತ್ವದಲ್ಲಿ ಸಭೆ
ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ನಿಟ್ಟಿನಲ್ಲಿ ಗುರುವಾರ ಇಂಧನ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ಸಭೆ ನಡೆಸಿತು.

ಪ್ರಸ್ತುತ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ಹಾಗೂ ವಸ್ತುಸ್ಥಿತಿ ಕುರಿತು ಚರ್ಚೆ ನಡೆಸಲಾಯಿತು. ಅಲ್ಲದೆ, ಈಗಾಗಲೇ ಸ್ಥಾಪಿಸಲಾಗಿರುವ ಹಾಗೂ ಸ್ಥಾಪಿಸಲು ಉದ್ದೇಶಿಸಿರುವ ಶಾಖೋತ್ಪನ್ನ ಘಟಕದ ಕುರಿತು ಸಮಿತಿ ಚರ್ಚೆ ನಡೆಸಿದೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವ ತಲೆದೋರುವ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಒಂದು ವೇಳೆ ರಾಜ್ಯದಲ್ಲಿ ವಿದ್ಯುತ್ ಅಭಾವ ಮುಂದಿನ ದಿನಗಳಲ್ಲಿ ಕಾಣಿಸಿಕೊಂಡರೆ ಹೊರರಾಜ್ಯದಿಂದ ವಿದ್ಯುತ್ ಖರೀದಿಸುವ ಕುರಿತು ಸಭೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರು: ನ.14ರಿಂದ ಬೃಹತ್ ಪುಸ್ತಕ ಮೇಳ
ಹೊಗೇನಕಲ್: ಟೆಂಡರ್ ರದ್ದತಿಗೆ ಆಗ್ರಹ
ಧಾರವಾಡ: ಭೀಕರ ಅಪಘಾತಕ್ಕೆ 5 ಬಲಿ
ಶ್ರೀರಾಮನ ಮೇಲೆ ಆಣೆ ಮಾಡಿ: ಕುಮಾರಸ್ವಾಮಿ
'ಕೈ' ಆತ್ಮಾವಲೋಕನ ಸಭೆಯಲ್ಲಿ ರಂಪಾಟ
ಗಣಿ ಅವ್ಯವಹಾರ ಕುರಿತು ಶೀಘ್ರ ವರದಿ: ಹೆಗ್ಡೆ