ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊಗೇನಕಲ್: ದೆಹಲಿಗೆ ಸರ್ವಪಕ್ಷ ನಿಯೋಗ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊಗೇನಕಲ್: ದೆಹಲಿಗೆ ಸರ್ವಪಕ್ಷ ನಿಯೋಗ
ಹೊಗೇನಕಲ್ ವಿವಾದ ಇದೀಗ ಮತ್ತೆ ಭುಗಿಲೆದ್ದಿದ್ದು, ಈ ಯೋಜನೆಗೆ ತಮಿಳುನಾಡು ಟೆಂಡರ್ ಕರೆದಿರುವುದನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದೆ.

ಈ ಸಂಬಂಧ ಟೆಂಡರ್ ಪ್ರಕ್ರಿಯೆಯ ರದ್ದತಿಗೆ ಸೂಚನೆ ನೀಡಬೇಕೆಂದು ಆಗ್ರಹಿಸುವ ನಿಟ್ಟಿನಲ್ಲಿ ಸರ್ವಪಕ್ಷಗಳ ನಿಯೋಗ ದೆಹಲಿಗೆ ತೆರಳಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿದ ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ, ಕೇಂದ್ರಕ್ಕೆ ಈ ವಿವಾದದ ಕುರಿತು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸುವ ನಿಟ್ಟಿನಲ್ಲಿ ಸರ್ವಪಕ್ಷ ನಿಯೋಗ ತೆರಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿದ್ಯುತ್ ಕೊರತೆ: ಈಶ್ವರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು: ನ.14ರಿಂದ ಬೃಹತ್ ಪುಸ್ತಕ ಮೇಳ
ಹೊಗೇನಕಲ್: ಟೆಂಡರ್ ರದ್ದತಿಗೆ ಆಗ್ರಹ
ಧಾರವಾಡ: ಭೀಕರ ಅಪಘಾತಕ್ಕೆ 5 ಬಲಿ
ಶ್ರೀರಾಮನ ಮೇಲೆ ಆಣೆ ಮಾಡಿ: ಕುಮಾರಸ್ವಾಮಿ
'ಕೈ' ಆತ್ಮಾವಲೋಕನ ಸಭೆಯಲ್ಲಿ ರಂಪಾಟ