ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಡಿಎ ಮುಖ್ಯ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಡಿಎ ಮುಖ್ಯ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿಡಿಎ ಮುಖ್ಯ ಎಂಜಿನಿಯರೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.

ಬಿಡಿಎಯ ಮುಖ್ಯ ಎಂಜಿನಿಯರ್ ಆಗಿದ್ದ ಡಿ.ಶಿವಶಂಕರ್ ಅವರು ಈಸ್ಟ್‌‌ಕೋಸ್ಟನ್ ಕನ್ಟ್ರಕ್ಷನ್‌ನಿಂದ 20ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಮುಖ್ಯ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದು, ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಮೂಲಗಳು ಹೇಳಿವೆ.

ಬುಧವಾರವಷ್ಟೇ ಲೋಕಾಯುಕ್ತ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಲ್.ರಂಗಪ್ಪ ಅವರ ಮನೆ ಮೇಲೆ ದಾಳಿ ನಡೆಸಿ 91ಲಕ್ಷಕ್ಕೂ ಅಧಿಕ ಮೊತ್ತದ ಆಸ್ತಿಯನ್ನು ಪತ್ತೆ ಹಚ್ಚಿದ ಬೆನ್ನಲ್ಲೇ, ಇಂದು ಮತ್ತೆ ಲೋಕಾಯುಕ್ತ ದಾಳಿಗೆ ಬಿಡಿಎ ಮುಖ್ಯ ಎಂಜಿನಿಯರ್ ಬಲೆ ಬಿದ್ದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸರ್ಕಾರದಿಂದ ಪ್ರತಿಪಕ್ಷಗಳ ನಿರ್ಲಕ್ಷ್ಯ: ಪ್ರಕಾಶ್
ಹೊಗೇನಕಲ್: ದೆಹಲಿಗೆ ಸರ್ವಪಕ್ಷ ನಿಯೋಗ
ವಿದ್ಯುತ್ ಕೊರತೆ: ಈಶ್ವರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು: ನ.14ರಿಂದ ಬೃಹತ್ ಪುಸ್ತಕ ಮೇಳ
ಹೊಗೇನಕಲ್: ಟೆಂಡರ್ ರದ್ದತಿಗೆ ಆಗ್ರಹ
ಧಾರವಾಡ: ಭೀಕರ ಅಪಘಾತಕ್ಕೆ 5 ಬಲಿ