ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕರಂದ್ಲಾಜೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕರಂದ್ಲಾಜೆ
ಮುಂದಿನ ದಿನಗಳಲ್ಲಿ ನಗರದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿಯೂ 6 ಗಂಟೆ 3ಫೇಸ್ ವಿದ್ಯುತ್ ನೀಡಲು ನಿರ್ಧರಿಸಿದೆ ಎಂದು ತಿಳಿಸಿರುವುದಾಗಿ ತಿಳಿಸಿದರು.

ಅಲ್ಲದೆ, ಉಳಿದ 6 ಗಂಟೆ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಖರೀದಿಗೆ 200 ಕೋಟಿ ಹೆಚ್ಚುವರಿ ಹಣ ಒದಗಿಸಲಾಗುವುದು ಎಂದು ಹೇಳಿದರು.

ಇದೇ ವೇಳ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕುರಿತು ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, 2008ರ ಜುಲೈ ತಿಂಗಳಿಂದ ಇದು ಅನ್ವಯವಾಗುತ್ತದೆ. ಇದರಿಂದ ಸರ್ಕಾರ 456ಕೋಟಿ ಹೊರೆಯಾಗಲಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಿನ್ನಾಭಿಪ್ರಾಯ ತ್ಯಜಿಸಲು ಡಿಕೆಶಿ ಸಲಹೆ
ಪಕ್ಷ ತೊರೆಯುವತ್ತ ಸಿದ್ದರಾಮಯ್ಯ ಚಿತ್ತ ?
ಹೊಗೇನಕಲ್ ಯೋಜನೆಗೆ ಹಣ ನೀಡದಂತೆ ಪತ್ರ: ಬೊಮ್ಮಾಯಿ
ಕೆಎಂಎಫ್- ಸರ್ಕಾರದ ನಡುವೆ ಜಟಾಪಟಿ
ಹೊಗೇನಕಲ್: ಸಾವು-ನೋವಿಗೆ ಕರುಣಾನಿಧಿಯೇ ಹೊಣೆ-ಕರವೇ
ಆಪರೇಶನ್ ಕಮಲ ಪಕ್ಷಕ್ಕೆ ಮುಳುವು: ಎಚ್‌ಡಿಕೆ