ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಲ್ಲಾ ತಾಲೂಕುಗಳಿಗೂ ನಿರಂತರ ವಿದ್ಯುತ್: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಲ್ಲಾ ತಾಲೂಕುಗಳಿಗೂ ನಿರಂತರ ವಿದ್ಯುತ್: ಈಶ್ವರಪ್ಪ
ಮುಂದಿನ ಒಂದೂವರೆ ವರ್ಷಗಳಲ್ಲಿ 3500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ನಿರಂತರ ವಿದ್ಯುತ್ ಪೂರೈಕೆ ಮಾಡುವ ನಿರಂತರ ಜ್ಯೋತಿ ಯೋಜನೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಶುಕ್ರವಾರ ಮಾಹಿತಿ ನೀಡಿದ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ, ಈ ಯೋಜನೆಯನ್ನು ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ನ. 9ರಂದು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.

ಈ ಯೋಜನೆಯ ಯಶಸ್ಸು ಆಧರಿಸಿ ರಾಜ್ಯದ ಉಳಿದೆಡೆಗಳಲ್ಲಿ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಈ ಯೋಜನೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನೇರವೇರಿಸಲಿದ್ದಾರೆ ಎಂದು ಹೇಳಿದರು.

ಅಲ್ಲದೆ, ಪ್ರಾಯೋಗಿಕ ಯೋಜನೆಯ ಜೊತೆಗೆ ಬೈಲಹೊಂಗಲ, ಕುಷ್ಟಗಿ, ಶಿಗ್ಗಾಂವಿ, ಪುತ್ತೂರು, ಮಳವಳ್ಳಿ ಮತ್ತಿತರೆ ತಾಲೂಕುಗಳಲ್ಲಿ ಶೀಘ್ರದಲ್ಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು ಕಾಲೇಜಿಗೆ ಅಡಿಗರ ಕೊಡುಗೆ
ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕರಂದ್ಲಾಜೆ
ಭಿನ್ನಾಭಿಪ್ರಾಯ ತ್ಯಜಿಸಲು ಡಿಕೆಶಿ ಸಲಹೆ
ಪಕ್ಷ ತೊರೆಯುವತ್ತ ಸಿದ್ದರಾಮಯ್ಯ ಚಿತ್ತ ?
ಹೊಗೇನಕಲ್ ಯೋಜನೆಗೆ ಹಣ ನೀಡದಂತೆ ಪತ್ರ: ಬೊಮ್ಮಾಯಿ
ಕೆಎಂಎಫ್- ಸರ್ಕಾರದ ನಡುವೆ ಜಟಾಪಟಿ