ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊಗೇನಕಲ್: ಕೇಂದ್ರದ ಮಧ್ಯಸ್ತಿಕೆಗೆ ಸಿಎಂ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊಗೇನಕಲ್: ಕೇಂದ್ರದ ಮಧ್ಯಸ್ತಿಕೆಗೆ ಸಿಎಂ ಆಗ್ರಹ
ಹೊಗೇನಕಲ್ ಯೋಜನೆಗೆ ಸಂಬಂಧ ಪಟ್ಟಂತೆ ತಮಿಳುನಾಡು ಸರ್ಕಾರ ಕರೆದಿರುವ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೂ ತಮಿಳುನಾಡು ಕಾಮಗಾರಿಯನ್ನು ಕೈಗೊಂಡಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡು ರಾಜ್ಯಗಳ ಮುಖಂಡರ ಸಭೆ ಕರೆದು ವಿವಾದ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ವಿವಾದಿತ ಹೊಗೇನಕಲ್ ಯೋಜನೆಗೆ ಸಂಬಂಧಪಟ್ಟಂತೆ ತಮಿಳುನಾಡು ಸರ್ಕಾರ ರಾಜ್ಯದ ಅನುಮತಿ ಪಡೆಯದೆ ಏಕಾಏಕಿ ಕಾಮಗಾರಿ ಕೈಗೊಂಡಿರುವುದು ಹಕ್ಕುಚ್ಯುತಿಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಕೆಎಂಎಫ್ ಕುರಿತಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿರೋಧ ಪಕ್ಷದ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿಗಳು, ಸರ್ಕಾರ ಇದರಲ್ಲಿ ಯಾವುದೇ ದುರುದ್ದೇಶ ಹೊಂದಿಲ್ಲ. ಪಕ್ಷಕ್ಕೆ ರಾಜ್ಯದ ಅಭಿವೃದ್ಧಿಯೇ ಮುಖ್ಯ ಗುರಿ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆಳ್ವರಿಗೆ ಮಾತಿನ ಮೇಲೆ ಹಿಡಿತವಿರಲಿ: ಖರ್ಗೆ
ದಲಿತ ಸಹಭೋಜನ: ಪೇಜಾವರ ಶ್ರೀಗಳಿಗೆ ಸವಾಲು
ಅದ್ದೂರಿ ಕನಕ ಜಯಂತಿಗೆ ಸಿದ್ಧತೆ: ಕರಂದ್ಲಾಜೆ
ಎಲ್ಲಾ ತಾಲೂಕುಗಳಿಗೂ ನಿರಂತರ ವಿದ್ಯುತ್: ಈಶ್ವರಪ್ಪ
ಮಂಗಳೂರು ಕಾಲೇಜಿಗೆ ಅಡಿಗರ ಕೊಡುಗೆ
ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕರಂದ್ಲಾಜೆ