ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆನೆಗಳ ಸಾವು: ವರದಿ ಸಲ್ಲಿಸಲು ಸರ್ಕಾರಕ್ಕೆ ಹೈ.ಕೋ ಅಪ್ಪಣೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆನೆಗಳ ಸಾವು: ವರದಿ ಸಲ್ಲಿಸಲು ಸರ್ಕಾರಕ್ಕೆ ಹೈ.ಕೋ ಅಪ್ಪಣೆ
ಹೆಚ್ಚುತ್ತಿರುವ ಆನೆಗಳ ಅಸ್ವಾಭಾವಿಕ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕುರಿತು ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕಪ್ಪುಸೋಗೆಯಲ್ಲಿ ನಾಲ್ಕು ಆನೆಗಳು ಅಸಹಜ ಸಾವಿಗೀಡಾಗಿರುವ ಮಾಧ್ಯಮಗಳ ವರದಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಸ್ವಪ್ರೇರಣೆಯಿಂದ ಪರಿವರ್ತನೆ ಮಾಡಿದ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್ ಅವರು, ಈ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದರು.
NRB

ಆನೆಗಳ ಸಾವಿನ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಅವರು, ಕಾಡಾನೆಗಳ ಸಂರಕ್ಷಣೆಗೆ ಸರ್ಕಾರ ಏನೇನು ಕ್ರಮ ಕೈಗೊಂಡಿದೆ ಎಂಬ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳು ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಆನೆಗಳ ಸಾವು ಹೆಚ್ಚಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ಪೀಳಿಗೆಗೆ ಆನೆಗಳನ್ನು ನಾವು ಬರೀ ಚಿತ್ರದಲ್ಲಿ ತೋರಿಸಬೇಕಾಗುತ್ತದೆ. ಆ ರೀತಿಯಾಗದಂತೆ ಆನೆಗಳ ಸಂರಕ್ಷಣೆ ಮಾಡುವುದು ಸರ್ಕಾರ ಹಾಗೂ ಅರಣ್ಯ ಇಲಾಖೆಯ ಕರ್ತವ್ಯವಾಗಬೇಕಾಗಿದೆ ಎಂದು ಎಚ್ಚರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ
ಆಳ್ವ ಹೇಳಿಕೆಯಲ್ಲಿ ಹುರುಳಿಲ್ಲ: ದೇಶಪಾಂಡೆ
ಹೊಗೇನಕಲ್: ಕೇಂದ್ರದ ಮಧ್ಯಸ್ತಿಕೆಗೆ ಸಿಎಂ ಆಗ್ರಹ
ಆಳ್ವರಿಗೆ ಮಾತಿನ ಮೇಲೆ ಹಿಡಿತವಿರಲಿ: ಖರ್ಗೆ
ದಲಿತ ಸಹಭೋಜನ: ಪೇಜಾವರ ಶ್ರೀಗಳಿಗೆ ಸವಾಲು
ಅದ್ದೂರಿ ಕನಕ ಜಯಂತಿಗೆ ಸಿದ್ಧತೆ: ಕರಂದ್ಲಾಜೆ