ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮ್ಯಾಗಿ: ಕೆಪಿಸಿಸಿಯಿಂದ ವಿವರಣೆ ಕೇಳಿದ ಹೈಕಮಾಂಡ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮ್ಯಾಗಿ: ಕೆಪಿಸಿಸಿಯಿಂದ ವಿವರಣೆ ಕೇಳಿದ ಹೈಕಮಾಂಡ್
ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಬಿರುಗಾಳಿಯೇ ಎಬ್ಬಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾರ್ಗರೇಟ್ ಆಳ್ವ ಅವರ ಹೇಳಿಕೆ ಮಾಗಿ ಕಾಲದಲ್ಲೂ ಕಾಂಗ್ರೆಸ್ ನಾಯಕರ ಬೆವರಿಳಿಸುವಂತಿದೆ.

ಮಾರ್ಗರೇಟ್ ಆಳ್ವಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಕೆಪಿಸಿಸಿಯಿಂದ ವಿವರಣೆ ಕೇಳಿದೆ. ಅಲ್ಲದೆ, ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪೃಥ್ವಿರಾಜ್ ಚೌಹಾಣ್ ಅವರನ್ನು ಕಿತ್ತು ಹಾಕುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ.

ಇದೇ ವೇಳೆ ಈ ಕುರಿತು ತನಿಖೆ ನಡೆಸುವಂತೆ ಕೆಪಿಸಿಸಿ ಆಗ್ರಹಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೆಪಿಸಿಸಿ ಹೈಕಮಾಂಡನ್ನು ಒತ್ತಾಯಿಸಿದೆ.

ಈ ನಡುವೆ, ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಮಾರ್ಗರೇಟ್ ಆಳ್ವಾರಿಗೆ ಹೈಕಮಾಂಡ್ ಸೂಚನೆ ನೀಡಿದೆ. ಇನ್ನು ಒಂದು ತಿಂಗಳ ಒಳಗಾಗಿ ರಾಜ್ಯದಲ್ಲಿ ಉಪಚುನಾವಣೆ ನಡೆಯಲಿರುವುದರಿಂದ ಇಂತಹ ಹೇಳಿಕೆಗಳು ಪಕ್ಷದ ಹಿನ್ನೆಡೆಗೆ ಕಾರಣವಾಗಬಹುದೆಂಬುದು ಹೈಕಮಾಂಡ್ ಕಳವಳವಾಗಿದೆ.

ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೆಎಂಎಫ್: ರೇವಣ್ಣನಿಗೆ ಬೆಂಬಲಕ್ಕೆ ಕುಮಾರ್
ಮಾರ್ಗರೆಟ್ ಹೇಳಿಕೆಗೆ ಸಿದ್ದು ಸಹಮತ
ಮ್ಯಾಗಿಗೆ ಗುತ್ತೇದಾರ್ ಬೆಂಬಲ
ಆನೆಗಳ ಸಾವು: ವರದಿ ಸಲ್ಲಿಸಲು ಸರ್ಕಾರಕ್ಕೆ ಹೈ.ಕೋ ಅಪ್ಪಣೆ
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ
ಆಳ್ವ ಹೇಳಿಕೆಯಲ್ಲಿ ಹುರುಳಿಲ್ಲ: ದೇಶಪಾಂಡೆ