ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 'ಪಟ್ಟಾಭಿಷೇಕ'
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 'ಪಟ್ಟಾಭಿಷೇಕ'
ಜೆಡಿಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪಕ್ಷದ ಧ್ವಜ ನೀಡುವ ಮೂಲಕ ಆಶೀರ್ವಾದ ಮಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಮಾರಸ್ವಾಮಿ, ಶೀಘ್ರದಲ್ಲಿಯೇ ತಾಲೂಕು ಮಟ್ಟದಿಂದ ಪಕ್ಷದ ಸಂಘಟನೆಗೊಳಿಸುವ ಕಾರ್ಯ ನಡೆಯಬೇಕಿದೆ. ಅಲ್ಲದೆ, ನೂತನ ಪದಾಧಿಕಾರಿಗಳ ಆಯ್ಕೆಯೂ ಆಗಬೇಕಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಇದೇ 17ರಂದು ಪಕ್ಷದ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಪಕ್ಷದ ಸಂಘಟನೆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಿರಂತರ ವಿದ್ಯುತ್ ಯೋಜನೆಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಿಂದಿನ ಸರ್ಕಾರದ ಆಡಳಿತದಲ್ಲಿ ವಿದ್ಯುತ್ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಪ್ರಸ್ತುತದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂಬ ಹೇಳಿಕೆಯನ್ನು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತೀವ್ರವಾಗಿ ಖಂಡಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಿಲ್ಲ ಎಂದು ಅವರು ಗಂಭೀರ ಆರೋಪ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶಿರಾಡಿಘಾಟ್ ರಸ್ತೆ ಕಾಮಗಾರಿಗೆ ಗುತ್ತಿಗೆದಾರರ ಹಿಂದೇಟು
ಮ್ಯಾಗಿ ಹೇಳಿಕೆಯ ಸತ್ಯದ ಬಗ್ಗೆ ತನಿಖೆಯಾಗಲಿ: ಜಾಲಪ್ಪ
ವಿದ್ಯುತ್ ಕೊರತೆಗೆ ಕೇಂದ್ರ ಕಾರಣ: ಸಿಎಂ
4 ಶಂಕಿತ ಉಗ್ರರು ಮಂಗಳೂರು ಪೊಲೀಸ್ ವಶಕ್ಕೆ
ಬಿಜೆಪಿ ಗಾಳ ಕಚ್ಚುತ್ತಿರುವ ಅಂಬರೀಷ್?
ಪಕ್ಷ ಬಿಟ್ಟವರಿಗೆ ನೋ ಎಂಟ್ರಿ: ಕುಮಾರಸ್ವಾಮಿ