ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ
NRB
ಕಳೆದ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಟಿಕೆಟ್‌ಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗಿತ್ತು ಎಂಬ ಹೇಳಿಕೆಗೆ ಸಹಮತ ವ್ಯಕ್ತಪಡಿಸಿರುವ ಸಂಸದ ಆರ್.ಎಲ್.ಜಾಲಪ್ಪ, ಉಪಚುನಾವಣೆಯ ದಿನಾಂಕ ಘೋಷಣೆ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ಘೋಷಿಸುವುದಾಗಿ ತಿಳಿಸಿದ್ದಾರೆ.

ತಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಜಾಲಪ್ಪ, ಆಳ್ವಾ ಹೇಳಿಕೆ ಕುರಿತು ಸಹಮತ ವ್ಯಕ್ತಪಡಿಸಿದ್ದು, ಈ ಕುರಿತು ಹೈಕಮಾಂಡ್‌ಗೆ ವಿವರಣೆ ನೀಡಲು ಸಿದ್ದ ಎಂದು ಹೇಳಿದ್ದಾರೆ.

ಅಲ್ಲದೇ ಮುಂಬರುವ ಉಪಚುನಾವಣೆಯ ದಿನಾಂಕ ಘೋಷಣೆಯ ನಿರೀಕ್ಷೆಯಲ್ಲಿದ್ದು, ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪಚುನಾವಣೆಯಲ್ಲಿ ತಟಸ್ಥ ನೀತಿ ಅನುಸರಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಹೈಕಮಾಂಡ್‌ನಿಂದ ಶಿಸ್ತು ಕ್ರಮ ಎದುರಿಸಲು ತಾನು ಸಿದ್ದ ಎಂದು ಜಾಲಪ್ಪ ತಿಳಿಸಿದ್ದು, ಶೀಘ್ರವೇ ರಾಜಕೀಯದಿಂದ ನಿವೃತ್ತಿ ಹೊಂದುವ ಇಚ್ಚೆ ವ್ಯಕ್ತಪಡಿಸಿರುವ ಅವರು, ಅಹಿಂದ ಕಾರ್ಯವನ್ನು ಮುಂದುವರಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೂಡಗಿಯಲ್ಲಿ ವಿದ್ಯುತ್ ಉತ್ಪಾದನೆಗೆ ಕೇಂದ್ರ ಅಸ್ತು
ಬೌದ್ದ ಧರ್ಮವನ್ನು ಟೀಕಿಸಿಲ್ಲ: ಪೇಜಾವರಶ್ರೀ
ವಲಸಿಗರಿಗಾಗಿ ತ್ಯಾಗಕ್ಕೆ ಸಿದ್ಧರಾಗಿ: ಸದಾನಂದಗೌಡ
ಕೆಎಂಎಫ್ ಮತ್ತೆ ಹೈಕೋರ್ಟ್‌ಗೆ ಮೊರೆ
ಆಳ್ವಾ ರಾಜೀನಾಮೆ ಸರಿಯಲ್ಲ: ಧರಂಸಿಂಗ್
ವಿದ್ಯುತ್ ಸಮಸ್ಯೆಗೆ ಬಿಜೆಪಿ ಕಾರಣ: ಎಚ್‌ಡಿಕೆ