ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ
NRB
ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಸಚಿವ ಆನಂದ್ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಿರುವುದಾಗಿ ರಾಜ್ಯ ಚುನಾವಣಾ ಆಯುಕ್ತ ವಿದ್ಯಾಶಂಕರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಆಸ್ನೋಟಿಕರ್ ಅವರು ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ತಪ್ಪು ಮಾಹಿತಿ ನೀಡಿರುವ ಕಾರಣದಿಂದಾಗಿ ತಹಶೀಲ್ದಾರ್ ಮೂಲಕ ಮೊಕದ್ದಮೆ ದಾಖಲು ಮಾಡುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಅಲ್ಲದೇ ಸಚಿವ ಆನಂದ್ ಆಸ್ನೋಟಿಕರ್ ಅವರು ಚುನಾವಣೆಗೆ ಸ್ಪರ್ಧಿಸುವ ಅರ್ಹತೆ ಕುರಿತು ಹೈಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ವಿವರಿಸಿದ್ದಾರೆ.

ಆನಂದ್ ಆಸ್ನೋಟಿಕರ್ ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ವಿವಾದ ಹುಟ್ಟು ಹಾಕಿತ್ತು, ಬಳಿಕ ಸಚಿವ ಆಸ್ನೋಟಿಕರ್ ಅವರು ತಾನು ಮಾಹಿತಿಯನ್ನು ಮುಚ್ಚಿಟ್ಟಿರುವುದು ಸತ್ಯ ಎಂದು ಬಹಿರಂಗವಾಗಿ ಹೇಳಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !
ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ
ಕೂಡಗಿಯಲ್ಲಿ ವಿದ್ಯುತ್ ಉತ್ಪಾದನೆಗೆ ಕೇಂದ್ರ ಅಸ್ತು
ಬೌದ್ದ ಧರ್ಮವನ್ನು ಟೀಕಿಸಿಲ್ಲ: ಪೇಜಾವರಶ್ರೀ
ವಲಸಿಗರಿಗಾಗಿ ತ್ಯಾಗಕ್ಕೆ ಸಿದ್ಧರಾಗಿ: ಸದಾನಂದಗೌಡ
ಕೆಎಂಎಫ್ ಮತ್ತೆ ಹೈಕೋರ್ಟ್‌ಗೆ ಮೊರೆ