ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಯಿಂದ ಜನತೆಗೆ ವಿಶ್ವಾಸದ್ರೋಹ: ಎಚ್‌ಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಯಿಂದ ಜನತೆಗೆ ವಿಶ್ವಾಸದ್ರೋಹ: ಎಚ್‌ಡಿಕೆ
ಬಹಳ ನಿರೀಕ್ಷೆಯಿಟ್ಟು ಮತಹಾಕಿದ್ದ ರಾಜ್ಯದ ಜನತೆಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಾಸದ್ರೋಹವೆಸಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಜಯನಗರದಲ್ಲಿನ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಬಹಳ ನಿರೀಕ್ಷೆ ಇಟ್ಟು ಚುನಾವಣೆಯಲ್ಲಿ ಮತ ಹಾಕಿದ್ದರು. ಆದರೆ ಯಡಿಯೂರಪ್ಪ ಆಡಳಿತ ವೈಖರಿಯಿಂದ ಜನ ಬೇಸತ್ತಿದ್ದಾರೆ ಎಂದು ಆಕ್ರೋಶಗೊಂಡಿದ್ದಾರೆ.

ಯಡಿಯೂರಪ್ಪನವರು ಅಭಿವೃದ್ಧಿ ಕಡೆಗಣಿಸಿ, ವಿರೋಧ ಪಕ್ಷದವರನ್ನು ತುಳಿಯುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಅದರ ಬದಲಾಗಿ ವಿರೋಧ ಪಕ್ಷಗಳನ್ನು ದೂರುವ ಬದಲು, ಅಭಿವೃದ್ಧಿ ಕಡೆಗೆ ಗಮನ ಹರಿಸಲಿ ಎಂದು ಅವರು ಸಲಹೆ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶೀಘ್ರವೇ ನೂತನ ಸಾರಿಗೆ ನೀತಿ ಜಾರಿ: ಅಶೋಕ್
ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ
ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !
ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ
ಕೂಡಗಿಯಲ್ಲಿ ವಿದ್ಯುತ್ ಉತ್ಪಾದನೆಗೆ ಕೇಂದ್ರ ಅಸ್ತು
ಬೌದ್ದ ಧರ್ಮವನ್ನು ಟೀಕಿಸಿಲ್ಲ: ಪೇಜಾವರಶ್ರೀ