ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊಗೇನಕಲ್: ಮೊಯ್ಲಿ ಹೇಳಿಕೆಗೆ ಸಿಎಂ ಆಕ್ರೋಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊಗೇನಕಲ್: ಮೊಯ್ಲಿ ಹೇಳಿಕೆಗೆ ಸಿಎಂ ಆಕ್ರೋಶ
ವಿವಾದಿತ ಹೊಗೇನಕಲ್ ನೀರಾವರಿ ಯೋಜನೆಗೆ ಕೇಂದ್ರದ ಮಧ್ಯಸ್ಥಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ, ಈ ವಿಚಾರದಲ್ಲಿ ಕೇಂದ್ರದ ಮಧ್ಯಸ್ಥಿಕೆ ಅನಗತ್ಯ ಎಂದು ಪ್ರತಿಕ್ರಿಯೆ ನೀಡಿರುವ ವೀರಪ್ಪ ಮೊಯ್ಲಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಗೇನಕಲ್ ವಿವಾದದ ವಿಷಯದಲ್ಲಿ ಪ್ರಧಾನಿಯವರು ಮಧ್ಯಪ್ರವೇಶಿಸಬೇಕು ಎಂಬ ಯಡಿಯೂರಪ್ಪ ಹೇಳಿಕೆಗೆ ವೀರಪ್ಪ ಮೊಯ್ಲಿ ಅವರು ಪ್ರತಿಕ್ರಿಯೆ ನೀಡುತ್ತ, ಈ ವಿಚಾರದಲ್ಲಿ ಕೇಂದ್ರದ ಮಧ್ಯಸ್ಥಿಕೆ ಅನಗತ್ಯ ಎಂದು ತಿಳಿಸಿದ್ದಾರೆ.

ಮೊಯ್ಲಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಈ ವಿಚಾರದಲ್ಲಿ ರಾಜಕಾರಣ ಮಾಡಲು ಬಯಸದೆ, ಸೌಹಾರ್ದಯುತವಾಗಿ ಬಗೆಹರಿಸಲು ಬದ್ದವಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯುತ್ ಸಮಸ್ಯೆ ಬಗ್ಗೆ ಮೊಯ್ಲಿ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಅವರ ಪಕ್ಷದಲ್ಲಿರುವ ಒಳಜಗಳಗಳನ್ನು ಮುಚ್ಚಿಹಾಕಲು ವಿಷಯವನ್ನು ಬೇರೆಡೆ ತಿರುಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ
ರಾಜ್ಯದ ಬೆದರಿಕೆಗೆ ಶಾಸ್ತ್ರೀಯ ಸ್ಥಾನ ನೀಡಿಲ್ಲ: ಮೊಯ್ಲಿ
ಬಿಜೆಪಿಯಿಂದ ಜನತೆಗೆ ವಿಶ್ವಾಸದ್ರೋಹ: ಎಚ್‌ಡಿಕೆ
ಶೀಘ್ರವೇ ನೂತನ ಸಾರಿಗೆ ನೀತಿ ಜಾರಿ: ಅಶೋಕ್
ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ
ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !