ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸ್ತ್ರೀಯ ಸ್ಥಾನ: ನೂರು ಮಂದಿಗೆ ಸನ್ಮಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸ್ತ್ರೀಯ ಸ್ಥಾನ: ನೂರು ಮಂದಿಗೆ ಸನ್ಮಾನ
ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನಕ್ಕಾಗಿ ಶ್ರಮಿಸಿದ 100 ಕನ್ನಡಪರ ಹೋರಾಟಗಾರರಿಗೆ ನ.30ರಂದು ಸನ್ಮಾನಿಸಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಸನ್ಮಾನ ಸಮಿತಿ ಅಧ್ಯಕ್ಷ ಆರ್. ಅಶೋಕ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಹಿತ್ಯ ಹೋರಾಟಗಾರರು, ಕಲಾವಿದರು, ಪತ್ರಕರ್ತರು ಸೇರಿದಂತೆ 100 ಜನರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

10 ಗ್ರಾಂ ಚಿನ್ನದ ಫಲಕ ಮತ್ತು ಫಲ-ತಾಂಬೂಲ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ ಸಚಿವರು, ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮುನ್ನ ಸನ್ಮಾನಿತರ ಗೌರವಾರ್ಥ ಬ್ಯಾಂಕ್ವೆಟ್ ಹಾಲ್‌‌ನಲ್ಲಿ ಚಹಾ ಕೂಟ ಏರ್ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಐತಿಹಾಸಿಕ ಹಬ್ಬವಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಕಲಾಮೇಳಗಳು ನಡೆಯಲಿವೆ. ಅಲ್ಲದೆ, ಸನ್ಮಾನಿತರ ಪಟ್ಟಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಲಾಗಿದ್ದು, ಶೀಘ್ರದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೆ, ಪ್ರತಿ ಜಿಲ್ಲಾ ಮಟ್ಟದಲ್ಲೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನಕ್ಕಾಗಿ ಹೋರಾಡಿದ ಕನ್ನಡಿಗರಿಗೆ ಸನ್ಮಾನ ಮಾಡಲು ನಿರ್ಧರಿಸಿದ್ದು, ಪ್ರತಿ ಜಿಲ್ಲೆಗೆ 2 ಲಕ್ಷ ರೂ. ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವೈದ್ಯರ ಮುಷ್ಕರ: 3 ಬೇಡಿಕೆ ಈಡೇರಿಕೆ
ಪಿಯು ಬೋರ್ಡ್‌ಗೆ ಬಾಂಬ್ ಬೆದರಿಕೆ ಪತ್ರ !
ಶಾಸ್ತ್ರೀಯ ಸ್ಥಾನ: ಮದ್ರಾಸ್ ಹೈಕೋರ್ಟ್ ವಿಚಾರಣೆ
ಕಟ್ಟಡ ಕುಸಿತ ಪ್ರಕರಣ: ಅವಶೇಷದಡಿ ಶವ ಪತ್ತೆ
ಎಬಿವಿಪಿಯಿಂದ ರಾಜ್ಯವ್ಯಾಪಿ ಕಾಲೇಜ್ ಬಂದ್
2009ರೊಳಗೆ ರಾಜ್ಯದ ರೈಲ್ವೆ ಕಾಮಗಾರಿ ಪೂರ್ಣ: ವೇಲು