19 ತಿಂಗಳ ನಂತರ ಡಾ. ರಾಜ್‌ಕುಮಾರ್ ಸ್ಮಾರಕ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು, ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಂಕು ಸ್ಥಾಪನೆ ನೇರವೇರಿಸಿದರು.
ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಅವರ ಸಮಾಧಿಯ ಬಳಿ ಶಂಕುಸ್ಥಾಪನೆ ನೇರೆವೇರಿಸಿದ ಮುಖ್ಯಮಂತ್ರಿ, ಕನ್ನಡ ಚಿತ್ರರಂಗದ ಮಹಾನ್ ಪ್ರತಿಭೆ ಡಾ. ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಸ್ಮಾರಕ ನಿರ್ಮಾಣಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಡಾ. ರಾಜ್‌ಕುಮಾರ್ ಸ್ಮಾರಕದಲ್ಲಿ ಉದ್ಯಾನವನ, ವಸ್ತು ಸಂಗ್ರಹಾಲಯ, ಯೋಗಕೇಂದ್ರ ಗ್ರಂಥಾಲಯ, ಬಯಲು ರಂಗಮಂದಿರ ಸೇರಿದಂತೆ ಹಲವು ಸೌಲಭ್ಯಗಳನ್ನು ಸ್ಮಾರಕ ಹೊಂದಿದೆ. |