ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಜೊತೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಗುತ್ತಿಗೆ ವೈದ್ಯಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಗುರುವಾರವೂ ಮುಂದುವರಿದಿದ್ದು, ರೋಗಿಗಳು ಪರದಾಡುವಂತಾಗಿದೆ.
ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಆಕ್ರೋಶಿತಗೊಂಡಿರುವ ಸಂಘದ 3900ವೈದ್ಯರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇದರಿಂದಾಗಿ ರೋಗಿಗಳ ಪಾಡು ಮತ್ತಷ್ಟು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.
ನಗರದ ಪ್ರಮುಖ ಆಸ್ಪತ್ರೆಗಳಾದ ಬೌರಿಂಗ್, ವಿಕ್ಟೋರಿಯಾ, ಜಯನಗರ ಸಾರ್ವಜನಿಕ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೆ ರೋಗಿಗಳು ನರಳುವಂತಾಗಿದೆ.
ವೈದ್ಯರ ಈ ನಿರ್ದಯ ನಿರ್ಧಾರದಿಂದಾಗಿ ಹಲವು ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ, ಹಣವಿಲ್ಲದ ಬಡರೋಗಿಗಳು ಮಾತ್ರ ಹತಾಶರಾಗಿ ಮನೆಗೆ ಮರಳಿದ್ದಾರೆ.
ಮುಷ್ಕರ ನಿರತರ ಜತೆಗೆ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರ ಗೌಡ ಅವರು ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಂಘದ 3,900 ವೈದ್ಯರೂ ಆರೋಗ್ಯ ಇಲಾಖೆ ನಿರ್ದೇಶಕರಿಗೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. |