ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವೈದ್ಯರ ಮುಷ್ಕರಕ್ಕೆ ಪ್ರತಿಪಕ್ಷಗಳ ಬೆಂಬಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೈದ್ಯರ ಮುಷ್ಕರಕ್ಕೆ ಪ್ರತಿಪಕ್ಷಗಳ ಬೆಂಬಲ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿರುವ ವೈದ್ಯರ ಬೆಂಬಲಕ್ಕೆ ಇದೀಗ ವಿರೋಧ ಪಕ್ಷಗಳು ಸಾಥ್ ನೀಡಿವೆ.

ಇಂದು ಮುಷ್ಕರ ನಿರತ ವೈದ್ಯರಲ್ಲಿ ಭೇಟಿ ನೀಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯಾದ್ಯಂತ ಬಡರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ರೋಗಿಗಳ ಸೇವೆ ಮಾಡುವುದು ಅತ್ಯವಶ್ಯಕ. ಈ ಬಗ್ಗೆ ಸರ್ಕಾರ ಮಧ್ಯ ಪ್ರವೇಶಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಸರಿಯಲ್ಲ ಎಂದು ಅವರು ತಿಳಿಸಿದರು.

ಇದೇ ವೇಳೆ ಮುಷ್ಕರ ನಿರತ ಸ್ಥಳಕ್ಕೆ ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ನಾಯಕ ಚೆಲುವರಾಯಸ್ವಾಮಿ ಮೊದಲಾದ ಜೆಡಿಎಸ್ ಮುಖಂಡರು, ಶೀಘ್ರವೇ ಸಮಸ್ಯೆ ಪರಿಹರಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವೈದ್ಯರ ವಿರುದ್ಧ ಹೈಕೋರ್ಟ್‌ಗೆ ದೂರು
ಆಳ್ವ ರಾಜೀನಾಮೆ ಅಂಗೀಕಾರ ಸರಿ: ಆಸ್ಕರ್
ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ಇಲ್ಲ: ಹೆಗಡೆ
ಗರುಡಮಾಲ್ ಪ್ರಕರಣ ಲೋಕಾಯುಕ್ತ ತನಿಖೆಗೆ
ಡೊನೇಷನ್ ತಡೆಗೆ ನೂತನ ನೀತಿ: ಕಾಗೇರಿ
'ನಂದಗುಡಿ' ಲೋಕಾಯುಕ್ತ ತನಿಖೆಗೆ