ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಂದ ಅಕ್ರಮವಾಗಿ ಗ್ಯಾಸ್ ತುಂಬಿಸುತ್ತಿರುವ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರ ಕಾಡುಗೋಡಿ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡವರಲ್ಲಿ ಓರ್ವ ಬಾಲಕನು ಸೇರಿದ್ದಾನೆ.
ಗಂಭೀರ ಗಾಯಗೊಂಡಿರುವ ಇಬ್ಬರನ್ನು ನಗರದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೇ. 80 ರಷ್ಟು ಸುಟ್ಟುಹೋಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಚಂದ್ರಶೇಖರ್ ಸಿಂಗ್ ಎನ್ನುವವರ ಕಟ್ಟಡದ ನೆಲ ಮಹಡಿಯಲ್ಲಿ ಬಾಡಿಗೆ ಇರುವ ವಿನೋದ್ ಎನ್ನುವವರ ಮನೆಯೊಳಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ಅಕ್ರಮವಾಗಿ ಶೇಖರಿಸಿಕೊಂಡು ಇತರ ಸಣ್ಣ ಸಿಲಿಂಡರ್ ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. |