ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಸ್ವಾಮಿ
ಟಿಕೆಟ್ ಮಾರಾಟ ಪ್ರಕರಣದ ಕುರಿತು ವಿರೋಧ ಪಕ್ಷಗಳ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿರುವ ಸಚಿವ ನರೇಂದ್ರ ಸ್ವಾಮಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೂ ಮಾನಹಾನಿಯಾಗುವ ಅಥವಾ ತೇಜೋವಧೆ ಮಾಡುವಂತಹ ಹೇಳಿಕೆಗಳನ್ನು ತಾವು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆಯ ಕುರಿತು ಸ್ವತಃ ಕಾಂಗ್ರೆಸ್ ಮುಖಂಡರೇ ಹೇಳಿಕೆ ನೀಡಿದ್ದಾಗ, ಅದರ ಸತ್ಯಾಸತ್ಯತೆ ಅರಿಯುವ ನಿಟ್ಟಿನಲ್ಲಿ ಈ ಹೇಳಿಕೆ ನೀಡಿದ್ದೇ ಹೊರತು ಮಾನಹಾನಿ ಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ನನಗೆ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಹಾಗೂ ಇದರಿಂದ ನಾನು ಬಹಳ ನೊಂದಿದ್ದೇನೆ. ಆಳ್ವಾ ಹೇಳಿಕೆಗೆ ನನ್ನ ಸಹಮತವೂ ಇದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಅರಿಯುವುದು ನನ್ನ ಉದ್ದೇಶವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಟಿಕೆಟ್ ಮಾರಾಟ-ದಾಖಲೆ ಕೊಡಿ: ದೇಶಪಾಂಡೆ
ಸಿಲಿಂಡರ್ ಸ್ಫೋಟಕ್ಕೆ ಓರ್ವ ಬಲಿ
ಬೆಂಗಳೂರು ಪುಸ್ತಕೋತ್ಸವಕ್ಕೆ ಅದ್ದೂರಿ ಚಾಲನೆ
ಶಾಸ್ತ್ರೀಯ ಸ್ಥಾನ: ನ.27ರಂದು ವಿಚಾರಣೆ
ಆನೆ ಸಾವು: ವರದಿ ನೀಡಲು ಹೈಕೋರ್ಟ್ ಆದೇಶ
ವೈದ್ಯರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ