ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನ್ಯಾ.ವೆಂಕಟಾಚಲ ಬಿಜೆಪಿಗೆ ಸೇರ್ಪಡೆ ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನ್ಯಾ.ವೆಂಕಟಾಚಲ ಬಿಜೆಪಿಗೆ ಸೇರ್ಪಡೆ ?
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಸೇರಿದಂತೆ ಹಲವು ಪ್ರಭಾವಿ ಗಣ್ಯ ವ್ಯಕ್ತಿಗಳು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಹಾಗೂ ಮಂಡ್ಯ ಭಾಗದ ಪ್ರಭಾವಿ ವ್ಯಕ್ತಿಗಳು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಘೋಷಿಸುವ ಮೂಲಕ ಮತ್ತೊಮ್ಮೆ ರಾಜ್ಯರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಇತ್ತೀಚೆಗಷ್ಟೇ ಸಚಿವ ಆರ್.ಅಶೋಕ್ ಅವರು ಮಾತನಾಡುತ್ತ, ಮಂಡ್ಯ ಭಾಗದ ಹಲವು ಗಣ್ಯರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದು, ಅವರೆಲ್ಲ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಮುನ್ಸೂಚನೆ ನೀಡಿದ್ದರು.

ಇದೀಗ ರಾಜ್ಯಾಧ್ಯಕ್ಷ ಸದಾನಂದ ಗೌಡರು ಗಣ್ಯರ ಸೇರ್ಪಡೆಯನ್ನು ಖಚಿತಪಡಿಸಿದ್ದು, ಇದರಲ್ಲಿ ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲ ಕೂಡ ಸೇರಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ತನ್ನ ತೆಕ್ಕೆಗೆ ಎಳೆದುಕೊಳ್ಳುತ್ತಿದ್ದ ಬಿಜೆಪಿ, ನಂತರ ನಗರಸಭೆ, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ತನ್ನ ಖರೀದಿ ಕಾರ್ಯವನ್ನು ಮುಂದುವರಿಸಿತ್ತು. ಇದೀಗ ಪ್ರಭಾವಿ ಗಣ್ಯರನ್ನು ಪಕ್ಷದ ತೆಕ್ಕೆಗೆ ಸೆಳೆದುಕೊಳ್ಳುವತ್ತ ಮುಂದಡಿ ಇಟ್ಟಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಿಂದೂ ದೇವರ ಅವಹೇಳನ ಕರಪತ್ರ: ಸಾರ್ವಜನಿಕರಿಂದ ಥಳಿತ
ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ
ಆಸ್ನೋಟಿಕರ್ ವಿರುದ್ಧ ವಾರಂಟ್ ಜಾರಿ
ಶಿವಮೊಗ್ಗ: ನಕ್ಸಲ್‌ನಿಂದ ಅಪಾರ ಶಸ್ತ್ರಾಸ್ತ್ರ ವಶ
ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಸ್ವಾಮಿ
ಟಿಕೆಟ್ ಮಾರಾಟ-ದಾಖಲೆ ಕೊಡಿ: ದೇಶಪಾಂಡೆ