ರಾಜ್ಯಾದ್ಯಂತ ವಿದ್ಯುತ್ ಕಡಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿಕೆ ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14ರಿಂದ ವಿದ್ಯುತ್ ಕೊರತೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡು ಬಂದಿದ್ದರೂ, ಇದೀಗ ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗಿದೆ. ಈ ಮೂಲಕ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ ಎಂದು ದೂರಿದರು.
ವಿದ್ಯುತ್ ವಿತರಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬ್ಲಾಕ್ ಮಟ್ಟದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.
ಇದೇ ವೇಳೆ ಅಹಿಂದಾ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರಿಂದ ಅಹಿಂದ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. |