ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕೆ ಯೋಗ್ಯವಲ್ಲ:ಡಿ.ವಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕೆ ಯೋಗ್ಯವಲ್ಲ:ಡಿ.ವಿ
ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬರಲು ಯೋಗ್ಯವಲ್ಲದ ಪಕ್ಷಗಳಾಗಿವೆ. ರಾಜ್ಯದ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.

ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಆಡಳಿತರೂಢ ಪಕ್ಷಕ್ಕೆ ಅಗತ್ಯ ಸಲಹೆ ಸೂಚನೆಗಳನ್ನು ನೀಡುವುದರಲ್ಲಿಯೂ ಕಾಂಗ್ರೆಸ್ ಮತ್ತು ಜೆಡಿಎಸ್ ವಿಫಲವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷವನ್ನು ಆಂತರಿಕ ಕಲಹಗಳು ಬಾಧಿಸುತ್ತಿದೆ. ಅಪ್ಪನಿಂದ ಮಗನಿಗೆ ಅಧಿಕಾರ ಹಸ್ತಾಂತರವಾಗುವುದೇ ಜೆಡಿಎಸ್ ಸಿದ್ದಾಂತವಾಗಿದೆ ಎಂದು ಲೇವಡಿ ಮಾಡಿದರು.

ಕಳೆದ 50 ವರ್ಷಗಳಿಂದ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಲ್ಪಸಂಖ್ಯಾತರನ್ನು ಕನಿಷ್ಠ ಮನುಷ್ಯರಂತೆ ನೋಡಲಿಲ್ಲ. ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಮೂಲಕ ಅಭಿವೃದ್ದಿಯನ್ನು ಕಡೆಗಣಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಅಭಿವೃದ್ದಿಗೆ ಬಜೆಟ್‌ನಲ್ಲಿ ಹೇರಳ ಹಣ ಮೀಸಲಿಟ್ಟಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎಚ್‌ಡಿಕೆ ನೇಮಕ ದೇವೇಗೌಡರ ನಿರ್ಧಾರವಲ್ಲ: ಹೊರಟ್ಟಿ
ಜಾತಿರಾಜಕಾರಣ ಅಭಿವೃದ್ಧಿಗೆ ಮಾರಕ: ಕಟ್ಟಾ
ರಾಜ್ಯಾದ್ಯಂತ ಕನಕ ಜಯಂತಿ
ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಚಲುರಾಯಸ್ವಾಮಿ
ವಿದ್ಯುತ್ ಕಡಿತ: ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು
ನ್ಯಾ.ವೆಂಕಟಾಚಲ ಬಿಜೆಪಿಗೆ ಸೇರ್ಪಡೆ ?