ಭಾರತೀಯ ಜನತಾ ಪಕ್ಷ ಒಂದು ಜನಾಂಗವನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿದೆ. ಆದರೆ ಅವರ ಸಂಘಟನೆಯೇ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್‌ರಾವ್ ದೇಶ್‌ಮುಖ್ ಇಂದಿಲ್ಲಿ ಆರೋಪಿಸಿದ್ದಾರೆ.ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಾಧ್ವಿ ಪ್ರಗ್ಯಾ ಸಿಂಗ್ ಅವರ ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ನೀಡುವ ಮೂಲಕ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.ಪ್ರಗ್ಯಾ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿ ಇದ್ದು, ಅದನ್ನು ನ್ಯಾಯಾಲಯದ ಮುಂದೆ ಹೇಳಲಿ ಎಂದು ಖಾರವಾಗಿ ನುಡಿದರು.ಬಿಜೆಪಿ ಮತ್ತು ಸಂಘಪರಿವಾರ ನಡೆಸುತ್ತಿರುವ ಭಯೋತ್ಪಾದನಾ ಚಟುವಟಿಕೆಗಳನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು,ಈ ವಿಷಯವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಜೆಂಡವನ್ನಾಗಿ ಬಳಸಿಕೊಳ್ಳಲಾಗುವುದು ಎಂದರು. |