ಬಜೆಟ್ ಕಾರ್ಯಕ್ರಮಗಳ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ತಿಂಗಳಿನಿಂದ ಹೆಬ್ಬೆಟ್ಟು ಸ್ಪರ್ಶಿಸಿ ಪಡಿತರ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ, ಆರೋಗ್ಯ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊರತುಪಡಿಸಿದರೆ ಉಳಿದ ಇಲಾಖೆಗಳ ಕಾರ್ಯ ತೃಪ್ತಿ ತಂದಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಬ್ಬಿಣದ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಸೈಕಲ್ ವಿತರಣೆಗೆ ಮತ್ತೊಮ್ಮೆ ಟೆಂಡರ್ ಕರೆಯಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಈ ತಿಂಗಳ ಅಂತ್ಯದೊಳಗೆ ಪಡಿತರ ಚೀಟಿ ನೀಡುವ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದರು. |