ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನಕ್ಸಲ್ ನಿಗ್ರಹಕ್ಕೆ ಆಧುನಿಕ ಶಸ್ತ್ರಾಸ್ತ್ರ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಕ್ಸಲ್ ನಿಗ್ರಹಕ್ಕೆ ಆಧುನಿಕ ಶಸ್ತ್ರಾಸ್ತ್ರ: ಸಿಎಂ
ನಕ್ಸಲ್ ನಿಗ್ರಹ ಪಡೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶೃಂಗೇರಿಯ ಹೊರನಾಡಿನ ಮಾವಿನಹೊಲ ಪ್ರದೇಶದಲ್ಲಿ ಬುಧವಾರ ಬೆಳಿಗ್ಗಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರು ಹಾಗೂ ಓರ್ವ ಪೊಲೀಸ್ ಪೇದೆ ಬಲಿಯಾಗಿದ್ದ ಘಟನೆಗೆ ಪೂರಕವಾಗಿ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಪೂರ್ಣ ವರದಿ ನೀಡುವಂತೆ ಸೂಚಿಸಿರುವುದಾಗಿ ಅವರು ಹೇಳಿದರು.

ಇತ್ತೀಚೆಗೆ ಮಲೆನಾಡು, ಪಶ್ಚಿಮಘಟ್ಟ ಭಾಗಗಳಲ್ಲಿ ಮತ್ತೆ ನಕ್ಸಲ್ ಹಾವಳಿ ಹೆಚ್ಚುತ್ತಿರುವುದರಿಂದ ಅಗತ್ಯ ಕ್ರಮಗಳನ್ನು ಕೈಗೊಂಡು, ಪೊಲೀಸ್ ಬಲವನ್ನು ಹೆಚ್ಚಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆಸ್ನೋಟಿಕರ್ ಪ್ರಕರಣ: ಎಸಿ ಎತ್ತಂಗಡಿ
ಉತ್ತಮ ಸೇವೆಯಿಂದ ಜನಮಾನ್ಯತೆ: ಠಾಗೋರ್
ಕಾನೂನು ಪ್ರಾಧಿಕಾರದಿಂದ ಜನರ ಬಳಿಗೆ 'ನ್ಯಾಯಾಲಯ'
ಅಂತಾರಾಷ್ಟ್ರೀಯ ವನ್ಯಜೀವಿ ಚೋರರ ಸೆರೆ
ಅನಂತಮೂರ್ತಿ ಬಗ್ಗೆ ಜನತೆಗೆ ಗೊತ್ತಿದೆ: ಡಿ.ವಿ
ಸಿದ್ದರಾಮಯ್ಯ ಪರ ಬಲ ಪ್ರದರ್ಶನ: ವರ್ತೂರು