ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಯದ್ದು ಗೂಂಡಾ ಸಂಸ್ಕೃತಿ: ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಯದ್ದು ಗೂಂಡಾ ಸಂಸ್ಕೃತಿ: ಕುಮಾರಸ್ವಾಮಿ
ಗೂಂಡಾಗಿರಿ ಮಾಡುವುದು ಮತ್ತು ಗೂಂಡಾ ರಾಜಕಾರಣ ಭಾರತೀಯ ಜನತಾ ಪಕ್ಷದ ಸಂಸ್ಕೃತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಈವರೆಗೆ ಆಡಳಿತ ನಡೆಸಿದ ಯಾವುದೇ ಪಕ್ಷಗಳು ಬಿಜೆಪಿ ರೀತಿಯಲ್ಲಿ ದ್ವೇಷದ ರಾಜಕಾರಣ ಮಾಡಿರಲಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ವ್ಯವಸ್ಥಿತ ದಾಳಿಯನ್ನು ಮಾಡುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆ, ಕೊಲೆ ಪ್ರಕರಣಗಳೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಭಾರತೀಯ ಜನತಾ ಪಕ್ಷ ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದೆ. ಆದರೆ, ನಾವು ಅದಕ್ಕೆಲ್ಲಾ ಅವಕಾಶ ನೀಡುವುದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ 20ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ನುಡಿದರು. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಬೇರು ಮಟ್ಟದಿಂದ ಬಲಿಷ್ಠವಾಗಿ ಸಂಘಟಿಸುತ್ತೇನೆ. ಪಕ್ಷದಲ್ಲಿನ ಎರಡನೇ ಹಂತದ ನಾಯಕರಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಕ್ಸಲ್ ನಿಗ್ರಹಕ್ಕೆ ಆಧುನಿಕ ಶಸ್ತ್ರಾಸ್ತ್ರ: ಸಿಎಂ
ಆಸ್ನೋಟಿಕರ್ ಪ್ರಕರಣ: ಎಸಿ ಎತ್ತಂಗಡಿ
ಉತ್ತಮ ಸೇವೆಯಿಂದ ಜನಮಾನ್ಯತೆ: ಠಾಗೋರ್
ಕಾನೂನು ಪ್ರಾಧಿಕಾರದಿಂದ ಜನರ ಬಳಿಗೆ 'ನ್ಯಾಯಾಲಯ'
ಅಂತಾರಾಷ್ಟ್ರೀಯ ವನ್ಯಜೀವಿ ಚೋರರ ಸೆರೆ
ಅನಂತಮೂರ್ತಿ ಬಗ್ಗೆ ಜನತೆಗೆ ಗೊತ್ತಿದೆ: ಡಿ.ವಿ