ರಾಜ್ಯದಲ್ಲಿನ ವಿದ್ಯುತ್ ಅಭಾವದ ಕುರಿತು ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿದ್ಯುತ್ ಕದ್ದರೆ ಎಚ್ಚರ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಕಳ್ಳತನ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಕಿಡಿಕಾರಿದ ಅವರು, ಈಗಾಗಲೇ ಹಲವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದಾಗಿ ಹೇಳಿದರು.
ವಿದ್ಯುತ್ ಕಳ್ಳತನ ಮಾಡುವವರಿಗೆ ಇದು ಕೊನೆಯ ಎಚ್ಚರಿಕೆ ಎಂದು ಗುಡುಗಿದ ಯಡಿಯೂರಪ್ಪ, ವಿದ್ಯುತ್ ಸೋರಿಕೆ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ತೀವ್ರ ತೆರನಾದ ವಿದ್ಯುತ್ ಅಭಾವ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಸರಕಾರ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿದೆ. ಅಲ್ಲದೇ ವಿದ್ಯುತ್ ಅಭಾವದಿಂದಾಗಿ ಬುಧವಾರ ಉತ್ತರಕರ್ನಾಟಕ ಭಾಗದ ರೈತನೊಬ್ಬ ನೇಣಿಗೆ ಶರಣಾದ ಘಟನೆಯೂ ನಡೆದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ವಿದ್ಯುತ್ ಕಳ್ಳತನದ ಬಗ್ಗೆ ಖಾರವಾಗಿ ಮಾತನಾಡಿದರು. |