ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನ. 28: ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನ. 28: ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
ರಾಜ್ಯ ಬಿಜೆಪಿ ಸರಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ನ.28ರಂದು ರಾಜ್ಯಾದ್ಯಂತ ಧರಣಿ ನಡೆಸಲಿದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಅಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.


ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಮಾಡಿದ ಆರೋಪ ಕುರಿತು ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ ಈ ರೀತಿ ಮಾತನಾಡುವುದು ಅವರ ಘನತೆಗೆ ತಕ್ಕುದಲ್ಲ ಎಂದರು. ಸಿದ್ದರಾಮಯ್ಯ ಅವರು ಗೌಡರನ್ನು ಒಬ್ಬ ಮಾಜಿ ಪ್ರಧಾನಿ ಎಂಬುದನ್ನೂ ಲೆಕ್ಕಿಸದೆ ಈ ರೀತಿ ಮಾತನಾಡಬಾರದು. ಅವರು ತಮ್ಮ ಮಾತಿನಲ್ಲಿ ಹಿಡಿತ ಇಟ್ಟುಕೊಳ್ಳಬೇಕು ಎಂದರು.

ಖಂಡನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ಖಂಡಿಸಿರುವ ಶಾಸಕ ನೆ.ಲ.ನರೇಂದ್ರಬಾಬು , ಸರಕಾರ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಅಕ್ರಮ ಸಕ್ರಮದ ಬಗ್ಗೆ ಸರಕಾರಕ್ಕೆ ಸ್ಪಷ್ಟ ನಿಲುವಿಲ್ಲ. ಇದರಿಂದಾಗಿ ಬಿಬಿಎಂಪಿ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತದೆ ಎಂದರು.

ಬಿಜೆಪಿ ಸರಕಾರ ತಾರತಮ್ಯ ಮಾಡುತ್ತಿದ್ದು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುತ್ತಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಂಗ್ಲೆ ನಿರ್ಮಾಣ: ಪ್ರತಿಪಕ್ಷಗಳಿಂದ ಅಪಸ್ವರ
ಆತ್ಮಹತ್ಯೆ:ಆರೋಪಿಗಳಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು
ಎನ್‌ಕೌಂಟರ್: ಇಬ್ಬರು ನಕ್ಸಲ್‌ರ ಗುರುತು ಪತ್ತೆ
ನೀರಿಗೆ ಮೀಟರ್ ಕಡ್ಡಾಯ: ಕಟ್ಟಾ ಸುಬ್ರಹ್ಮಣ್ಯ
ವಿದ್ಯುತ್ ಕದ್ದರೆ ಕ್ರಿಮಿನಲ್ ದಾವೆ: ಯಡಿಯೂರಪ್ಪ
ಹೆಬ್ಬಾಳದಲ್ಲಿ ಸಚಿವರಿಗಾಗಿ ಐಷಾರಾಮಿ ಬಂಗಲೆ