ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಹಗಲೆಲ್ಲಾ ಕಾಂಗ್ರೆಸ್‌ನಲ್ಲೇ ಇರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ರಾತ್ರಿ ಕದ್ದು ಮುಚ್ಚಿ ಮುಖ್ಯಮಂತ್ರಿಯವರನ್ನು ಭೇಟಿಯಾಗ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎನ್ನುವ ಸಿದ್ದರಾಮಯ್ಯನವರು ಕದ್ದು ಮುಚ್ಚಿ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆಗೊಂಡರೂ ಕಾಂಗ್ರೆಸ್‌ನೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಜನತೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯಲ್ಲಿ ಹೊರಾಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವ ಸಂಗತಿ ಈಗ ಮುಗಿದ ಅಧ್ಯಾಯ. ನಮ್ಮ ಪಕ್ಷ ಮತ್ತು ಕಾರ್ಯಕರ್ತರ ಬಲ ಏನೆಂಬುದು ಉಪಚುನಾವಣೆಯಲ್ಲಿ ತೋರಿಸುತ್ತೇವೆ. ಬಿಜೆಪಿ ಹಣದ ಬಲದಿಂದ ಎಲ್ಲವನ್ನೂ ಖರೀದಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ಉಪಚುನಾವಣೆಯನ್ನು ಗುರಿಯಾಗಿಟ್ಟುಕೊಂಡಿರುವ ಬಿಜೆಪಿ ಪಕ್ಷವನ್ನು ಬೆಳೆಸುವ ಸಲುವಾಗಿ ಬೇರೆ ಯಾವುದೇ ಕ್ಷೇತ್ರಗಳಿಗೆ ನಯಾಪೈಸೆ ಅನುದಾನ ಮಾಡುತ್ತಿಲ್ಲ. ಚುನಾವಣೆ ನಡೆಯಲಿರುವ ಕ್ಷೇತ್ರವಾದ ಮದ್ದೂರಿಗೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಅವರು ಲೇವಡಿ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಏಕರೂಪ ವೇತನಕ್ಕೆ ಸಿಎಂ ಒಪ್ಪಿಗೆ
ಮಾಲೆಗಾಂವ್ ಸ್ಫೋಟಕ್ಕೆ ಆರ್‌ಡಿಎಕ್ಸ್ ಬಳಕೆ: ಪಾಂಡೆ
ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ
ಚರ್ಚ್ ಸ್ಫೋಟ: 81 ಮಂದಿ ಆರೋಪ ಸಾಬೀತು
ಲೋಕಸಭೆ: ಜೆಡಿಎಸ್‌ನಿಂದ ಅನಂತಮೂರ್ತಿ ಸ್ಪರ್ಧೆ?
ಬೌರಿಂಗ್ ಆಸ್ಪತ್ರೆಯಲ್ಲಿ ಪಾಂಡೆ ಮಂಪರು ಪರೀಕ್ಷೆ