ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಐಎಎಲ್ ಸಿಇಒ ಬ್ರೂನರ್ ರಾಜೀನಾಮೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಐಎಎಲ್ ಸಿಇಒ ಬ್ರೂನರ್ ರಾಜೀನಾಮೆ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಟೀಕೆಗೆ ಗುರಿಯಾಗಿರುವ ನಿಲ್ದಾಣ ನಿಯಮಿತದ (ಬಿಐಎಎಲ್) ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅಲ್ಬರ್ಟ್ ಬ್ರೂನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಸಮಿತಿಯ ಸದಸ್ಯರಾದ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುಣಮಟ್ಟದಲ್ಲಿ ಕಳಪೆಯಾಗಿದ್ದರಿಂದ ಬ್ರೂನರ್ ಅವರು ರಾಜೀನಾಮೆ ನೀಡಿರುವುದಾಗಿ ಸಮಿತಿಯ ಸದಸ್ಯರಲ್ಲೊಬ್ಬರಾದ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಬ್ರೂನರ್ ಅವರ ಗುತ್ತಿಗೆ ಅವಧಿ 2009ರ ಫೆಬ್ರವರಿ 1ಕ್ಕೆ ಅಂತ್ಯಗೊಳ್ಳಲಿದ್ದು, ಅಲ್ಲಿಯವರೆಗೆ ಕಾರ್ಯ ನಿರ್ವಹಿಸಲಿದ್ದು, ಅವಧಿ ವಿಸ್ತರಣೆ ಬಯಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಸಿಇಒ ಹುದ್ದೆಗೆ ಬ್ರೂನರ್ ಅವರು ಸಂಸ್ಥೆಯ ಸಿಇಒ ಮಾರ್ಕೆಲ್ ಹಂಗರ್ ಬಹ್ಲರ್ ಅವರು ಉತ್ತಮವಾದ ಕಾರ್ಯ ನಿರ್ವಹಿಸಿಕೊಂಡು ಹೋಗಬೇಕಾದ ಹೊಣೆಗಾರಿಕೆ ಇದೆ ಎಂದು ಅವರು ಹೇಳಿದರು.

ನೂತನ ವಿಮಾನ ನಿಲ್ದಾಣದ ಗುಣಮಟ್ಟ ಸರಿಯಿಲ್ಲ ಎಂಬ ಕೂಗು, ಅದರ ಕುರಿತು ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಮೊಕದ್ದಮೆ, ರಾಜ್ಯ ಸರಕಾರದಿಂದ ಕೈಗೊಂಡಿರುವ ತನಿಖೆ ಇತ್ಯಾದಿ ಗಲಾಟೆಗಳ ನಡುವೆ ಬ್ರೂನರ್ ಈ ನಿರ್ಧಾರ ಕುತೂಹಲ ಕೆರಳಿಸಿದೆ.

2002ರಲ್ಲಿ ಬಿಐಎಎಲ್ ನ ಸಿಇಒ ಆಗಿ ನೇಮಕಗೊಂಡಿದ್ದ ಅವರು, 2005ರಲ್ಲಿ ದೇವನಹಳ್ಳಿ ಬಳಿ ನಿಲ್ದಾಣದ ನಿರ್ಮಾಣ ಪ್ರಾರಂಭವಾಗಿ 2008ರ ಮೇ ನಲ್ಲಿ ಉದ್ಘಾಟನೆಗೊಂಡಿತ್ತು. ಆದರೆ ಇದರ ಗುಣಮಟ್ಟದ ಬಗ್ಗೆ ಸಾಕಷ್ಟು ವಿವಾದಗಳು ಹುಟ್ಟಿಕೊಂಡಿತ್ತು.

ನಾನು ಬಿಐಎಎಲ್ ಬಿಡುವುದು ಸಂಪೂರ್ಣ ವೈಯಕ್ತಿಕ ನಿರ್ಧಾರ. ಇಲ್ಲಿಯವರೆಗೂ ನನಗೆ ಸಹಾಯ ಸಹಕಾರ ನೀಡಿದ ಎಲ್ಲರಿಗೂ ಅಭಾರಿಯಾಗಿದ್ದೇನೆ ಎಂದು ಬ್ರೂನರ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೊಗೇನಕಲ್: ಜಂಟಿ ಸರ್ವೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗಡಿ ಒತ್ತುವರಿ: ತನಿಖೆಗೆ ಕಾಂಗ್ರೆಸ್ ಆಗ್ರಹ
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಏಕರೂಪ ವೇತನಕ್ಕೆ ಸಿಎಂ ಒಪ್ಪಿಗೆ
ಮಾಲೆಗಾಂವ್ ಸ್ಫೋಟಕ್ಕೆ ಆರ್‌ಡಿಎಕ್ಸ್ ಬಳಕೆ: ಪಾಂಡೆ
ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ