ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಳಪೆ ಗುಣಮಟ್ಟದಲ್ಲಿ ಕಟ್ಟಲಾಗಿದೆ ಎಂದು ಕೆಪಿಸಿಸಿ ಕಾರ್ಯಧಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲಾಭಕ್ಕಾಗಿ ಕಟ್ಟಲಾಗಿದೆ ವಿನಃ ಗುಣಮಟ್ಟದಲ್ಲಿ ಕೊರತೆ ಕಂಡು ಬಂದಿದೆ ಎಂದರು.
ಈ ಕಾಮಗಾರಿಯಲ್ಲಿ ಭಾರೀ ವಂಚನೆ ನಡೆದಿದ್ದು, ಗುತ್ತಿಗೆದಾರರಾದ ವಿಮನ್ಸ್ ಕಂಪೆನಿಯಿಂದ ಮೋಸವಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಇದು ಅಂತಾರಾಷ್ಟ್ರೀಯ ಗುಣಮಟ್ಟವಿಲ್ಲದ ನಿಲ್ದಾಣ ಎಂದು ದೂರಿದರು.
ಈ ಬಗ್ಗೆ ಜಂಟಿ ಸದನ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಡಿ.ಕೆ.ಶಿವಕುಮಾರ್, ನಿಲ್ದಾಣದ ಉಸ್ತುವಾರಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನೀಡಬೇಕೆಂದು ಆಗ್ರಹಿಸಿದರು. |